ಡಿಸಿಪಿಗೆ ಮುಚ್ಚಳಿಕೆ ಬರೆದು ಕೊಟ್ಟ ವಿಜಯ್‌

7
ನಟ ದುನಿಯಾ ವಿಜಯ್‌ಗೆ ಡಿಸಿಪಿ ಅಣ್ಣಾಮಲೈ ಎಚ್ಚರಿಕೆ

ಡಿಸಿಪಿಗೆ ಮುಚ್ಚಳಿಕೆ ಬರೆದು ಕೊಟ್ಟ ವಿಜಯ್‌

Published:
Updated:
Deccan Herald

ಬೆಂಗಳೂರು: ಕೌಟುಂಬಿಕ ವಿಷಯವಾಗಿ ಗುರುವಾರ ವಿಚಾರಣೆ ಹಾಜರಾಗಿದ್ದ ನಟ ದುನಿಯಾ ವಿಜಯ್‌ ಅವರು ಸಾರ್ವಜನಿಕರ ಹಾಗೂ ಕಾನೂನಿನ ವಿರುದ್ಧ ನಡೆದುಕೊಳ್ಳುವುದಿಲ್ಲ ಎಂದು ದಕ್ಷಿಣ ಭಾಗದ ಡಿಸಿಪಿ ಅಣ್ಣಾಮಲೈ ಅವರಿಗೆ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ.

ಕೌಟುಂಬಿಕ ಕಲಹದಿಂದ ಬೀದಿ ರಂಪಾಟದ ಹಿನ್ನೆಲೆಯಲ್ಲಿ ಗಿರಿನಗರ ಠಾಣೆಯಲ್ಲಿ ನಾಗರತ್ನ ಹಾಗೂ ದುನಿಯಾ ವಿಜಯ್‌ ವಿರುದ್ಧ ಐಪಿಸಿ ಸೆಕ್ಷನ್ 107ರಡಿ ಪ್ರಕರಣ ದಾಖಲಿಸಿದ್ದರು. ವಿಚಾರಣೆಗೆ ಹಾಜರಾಗುವಂತೆ ವಿಜಯ್‌ ದಂಪತಿಗೆ ಪೊಲೀಸರು ನೋಟಿಸ್ ನೀಡಿದ್ದರು.

ವಿಜಯ್ ಜೊತೆ ಆಗಮಿಸಿದ್ದ ಎರಡನೇ ಪತ್ನಿ ಕೀರ್ತಿಗೌಡ, ಪುತ್ರ, ತಂದೆ ಮತ್ತು ತಾಯಿ ಅವರ ಹೇಳಿಕೆಗಳನ್ನೂ ದಾಖಲಿಸಿಕೊಂಡರು. ವಿಜಯ್ ಮೊದಲ ಪತ್ನಿ ನಾಗರತ್ನ ಅವರು ವಿಚಾರಣೆಗೆ ಹಾಜರಾಗಿದ್ದರು. ಅಲ್ಲದೆ, ₹ 5 ಲಕ್ಷ ಭದ್ರತಾ ಠೇವಣಿ ಪಡೆದ ಡಿಸಿಪಿ, ಸಮಾಜ ಸ್ವಾಸ್ಥ್ಯ ಹಾಳು ಮಾಡಿದರೆ, ಕ್ರಮ ಕೈಗೊಳ್ಳಲಾಗುವುದು ಎಂದು ವಿಜಯ್‌ಗೆ ಎಚ್ಚರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯ್‌, ಅಣ್ಣಾಮಲೈ ಅವರು ಪ್ರಾಮಾಣಿಕ ಅಧಿಕಾರಿ. ಅವರ ಬಗ್ಗೆ ತುಂಬಾ ಗೌರವವಿದೆ. ಅವರು ಹೇಳಿದ ರೀತಿ ನಡೆದುಕೊಳ್ಳುತ್ತೇನೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 2

  Sad
 • 0

  Frustrated
 • 0

  Angry

Comments:

0 comments

Write the first review for this !