ಕಾಂಗ್ರೆಸ್‌ನವರು ಬುರ್ಖಾ ಹಾಕಲಿ: ಸದಾನಂದಗೌಡ

ಶನಿವಾರ, ಏಪ್ರಿಲ್ 20, 2019
31 °C

ಕಾಂಗ್ರೆಸ್‌ನವರು ಬುರ್ಖಾ ಹಾಕಲಿ: ಸದಾನಂದಗೌಡ

Published:
Updated:

ಬೆಂಗಳೂರು: ‘ಅಭಿವೃದ್ಧಿ ಕಾರ್ಯಗಳನ್ನು ಮಾಡದ ಕಾಂಗ್ರೆಸಿಗರು ಬುರ್ಖಾ ಹಾಕಿಕೊಂಡು ಮತ ಕೇಳಲಿ. ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿ ನಾವು ಮತ ಯಾಚಿಸುತ್ತಿದ್ದೇವೆ. ಕಾಂಗ್ರೆಸಿಗರು ಮನಮೋಹನ್ ಸಿಂಗ್ ಹೆಸರು ಹೇಳಿಕೊಂಡು ಮತ ಯಾಚಿಸಲಿ’ ಎಂದು ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದ ಗೌಡ ವ್ಯಂಗ್ಯವಾಡಿದರು.

ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ವೀರಾಂಜನೇಯ ದೇವಸ್ಥಾನದ ಸಮೀಪ ಪ್ರಚಾರ ವಾಹನಗಳಿಗೆ ಮಂಗಳವಾರ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

‘ಕೇಂದ್ರದಿಂದ ಹೆಚ್ಚು ಅನುದಾನ ಕೊಡಿಸಿ ಎಂದು ನನ್ನ ಮನೆ ಬಾಗಿಲಿಗೆ ಬಂದಿದ್ದನ್ನು ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಬೈರೇಗೌಡರು ಮರೆತಿದ್ದಾರೆಯೇ ಅಥವಾ ಇದು ಕಾಂಗ್ರೆಸಿಗರ 420 ಬುದ್ಧಿ ಎನ್ನಬೇಕೇ’ ಎಂದು ಅವರು ವಾಗ್ದಾಳಿ ನಡೆಸಿದರು.

‘ಸದಾನಂದಗೌಡರು ಕ್ಷೇತ್ರಕ್ಕೆ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಎಂದು ಕೃಷ್ಣ ಬೈರೇಗೌಡ ಆರೋಪಿಸುತ್ತಿದ್ದಾರೆ. ಇದು ಮರೆಗುಳಿತನವೇ, ಚುನಾವಣಾ ರಾಜಕೀಯವೇ ಎಂಬುದನ್ನು ಸ್ಪಷ್ಟಪಡಿಸಬೇಕು. ಒಂದೂವರೆ ತಿಂಗಳ ಹಿಂದಷ್ಟೇ ದೆಹಲಿಯ ನನ್ನ ಮನೆಯಲ್ಲಿ ರಾಜ್ಯದ ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರನ್ನು ಆಹ್ವಾನಿಸಿ ಚರ್ಚೆ ನಡೆಸಿ ಕೇಂದ್ರದಿಂದ ಹೆಚ್ಚು ಅನುದಾನ ಕೊಡಿಸಿದ್ದನ್ನು ಅವರು ಮರೆತಿರಬೇಕು’ ಎಂದರು.

‘ಯುಪಿಎ ಸರ್ಕಾರ 2009–2014ರ ಅವಧಿಯಲ್ಲಿ ರಾಜ್ಯಕ್ಕೆ ₹74 ಸಾವಿರ ಕೋಟಿ ಅನುದಾನ ನೀಡಿತ್ತು. ಬಿಜೆಪಿ ಸರ್ಕಾರ 2014-2019ರ ಅವಧಿಯಲ್ಲಿ ₹2.42 ಲಕ್ಷ ಕೋಟಿ ಅನುದಾನ ನೀಡಿದೆ. ಇದು ಕೃಷ್ಣ ಬೈರೇಗೌಡ ಅವರಿಗೆ ಗೊತ್ತಿಲ್ಲವೇ. ಹೋಟೆಲ್‍ಗಳಲ್ಲಿ ಕುಳಿತು ಗುತ್ತಿಗೆದಾರರಿಂದ ಕಲೆಕ್ಷನ್ ಮಾಡಿಸುವುದು ಮಾತ್ರ ಗೊತ್ತಾ’ ಎಂದು ಪ್ರಶ್ನಿಸಿದರು.

ಬರಹ ಇಷ್ಟವಾಯಿತೆ?

 • 5

  Happy
 • 1

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !