ನಾನು ಪಾಲಿಕೆ ಸದಸ್ಯನಲ್ಲ: ಡಿವಿಎಸ್‌

ಭಾನುವಾರ, ಏಪ್ರಿಲ್ 21, 2019
32 °C

ನಾನು ಪಾಲಿಕೆ ಸದಸ್ಯನಲ್ಲ: ಡಿವಿಎಸ್‌

Published:
Updated:
Prajavani

ಬೆಂಗಳೂರು: ‘ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದ ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ. ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ’ ಎಂದು ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಟೀಕಿಸಿದರು.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ ಪ್ರಚಾರ ನಡೆಸಿ ಮಾತನಾಡಿದ ಅವರು, ‘ನಾನು ವಾರ್ಡ್‌ಗಳಿಗೆ ಭೇಟಿ ನೀಡಿಲ್ಲ ಎಂದು ಕಾಂಗ್ರೆಸ್‌ ಅಭ್ಯರ್ಥಿ ಕೃಷ್ಣ ಬೈರೇಗೌಡ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ನಾನು ಪಾಲಿಕೆ ಸದಸ್ಯನಲ್ಲ. ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ಪಾಲಿಕೆ ಸದಸ್ಯರಿದ್ದಾರೆ. ನಾನು ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಆದ್ಯತೆ ನೀಡುತ್ತಿದ್ದು, ಕೃಷ್ಣಬೈರೇಗೌಡರ ರೀತಿ ಬ್ಯಾಟರಾಯನಪುರಕ್ಕೆ ಮಾತ್ರ ಸೀಮಿತಗೊಂಡಿಲ್ಲ’ ಎಂದು ಲೇವಡಿ ಮಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !