ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡಿಎದಲ್ಲಿ 25 FDA, SDA ಸೇರಿ 101 ಹುದ್ದೆಗಳಿಗೆ ಕೆಇಎ ವತಿಯಿಂದ ಅರ್ಜಿ ಆಹ್ವಾನ

ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 76 ಹುದ್ದೆ
Published 11 ಮಾರ್ಚ್ 2024, 14:32 IST
Last Updated 11 ಮಾರ್ಚ್ 2024, 14:32 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ದಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕರು (ಎಫ್‌ಡಿಎ, ಎಸ್‌ಡಿಎ) ಹುದ್ದೆಗಳ ಭರ್ತಿಗೆ ನೇಮಕಾತಿ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಒಟ್ಟು 25 ಹುದ್ದೆಗಳಿದ್ದು (ಕಲ್ಯಾಣ ಕರ್ನಾಟಕ ವೃಂದ ಸೇರಿ) ಮಾರ್ಚ್ 24 ರಂದು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ. ಅಂದೇ ವಿವರವಾದ ಅಧಿಸೂಚನೆ ಬಿಡಲಾಗುವುದು ಎಂದು ತಿಳಿಸಿದೆ.

ಲಿಖಿತ ‍ಪರೀಕ್ಷೆ ಮೂಲಕ ನೇರ ನೇಮಕಾತಿ ನಡೆಯಲಿದೆ.

ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 76 ಹುದ್ದೆಗಳಿಗೆ ನೇಮಕಾತಿ ಪ್ರಾರಂಭಿಸಲಾಗುವುದು ಎಂದು ಕೆಇಎ ತಿಳಿಸಿದೆ.

ಇದಕ್ಕೂ ಸಹ ಮಾರ್ಚ್ 24 ರಂದು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ. ಅಂದೇ ವಿವರವಾದ ಅಧಿಸೂಚನೆ ಬಿಡಲಾಗುವುದು ಎಂದು ತಿಳಿಸಿದೆ. ಲಿಖಿತ ‍ಪರೀಕ್ಷೆ ಮೂಲಕ ನೇರ ನೇಮಕಾತಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT