1,242 ಹುದ್ದೆಗಳ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪಟ್ಟಿ ಪ್ರಕಟ

ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯ್ಕೆಯಾದವರ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ.
ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಮಾರ್ಚ್ 12ರಿಂದ 16ರವರೆಗೆ 26 ವಿವಿಧ ವಿಷಯಗಳಿಗೆ ನಡೆದಿತ್ತು. ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ವಿಷಯವಾರು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ ಮೂಲಕ ನೋಡಬಹುದು.
ಅಧಿಕೃತ ವೆಬ್‌ಸೈಟ್: https://cetonline.karnataka.gov.in
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.