ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪದವಿ ಪಾಸಾದವರಿಗೆ 17,727 ವಿವಿಧ ಹುದ್ದೆಗಳು: SSCಯಿಂದ ನೇಮಕಾತಿ

ಕೇಂದ್ರ ಸರ್ಕಾರದ ವಿವಿಧ ಸಚಿವಾಲಯ ಹಾಗೂ ಸಂಸ್ಥೆಗಳಲ್ಲಿನ ಹುದ್ದೆಗಳು
Published 3 ಜುಲೈ 2024, 13:05 IST
Last Updated 3 ಜುಲೈ 2024, 13:05 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರದ ವಿವಿಧ ಸಚಿವಾಲಯ ಹಾಗೂ ಸಂಸ್ಥೆಗಳಲ್ಲಿನ ಗ್ರೂಪ್ ಎ, ಬಿ ಹಂತದ ಮತ್ತು ಇನ್‌ಸ್ಪೆಕ್ಟರ್, ಹಿರಿಯ ಸಹಾಯಕ ಹಂತದ ಒಟ್ಟು 17,727 ಹುದ್ದೆಗಳ ಭರ್ತಿಗೆ ಎಸ್‌ಎಸ್‌ಸಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಜುಲೈ 24 ಅರ್ಜಿ ಸಲ್ಲಿಸಲು ಕಡೆಯ ದಿನ. ಯಾವುದೇ ಪದವಿ ತೇರ್ಗಡೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

ಸಂಯೋಜಿತ ಪದವಿ ಮಟ್ಟದ ಪರೀಕ್ಷೆ ಮೂಲಕ ನೇಮಕಾತಿ ನಡೆಯುತ್ತದೆ. ವಿವರವಾದ ಅಧಿಸೂಚನೆಗೆ https://ssc.gov.in/ ವೆಬ್‌ಸೈಟ್ ಪರಿಶೀಲಿಸಬಹುದು.

ಇಂಗ್ಲಿಷ್, ಹಿಂದಿ ಜೊತೆಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಉಡುಪಿ ಹಾಗೂ ಶಿವಮೊಗ್ಗ ಪರೀಕ್ಷಾ ಕೇಂದ್ರಗಳಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT