ಬೆಂಗಳೂರು: ದೇಶದ ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಯುಕೋ ಬ್ಯಾಂಕ್ 250 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿದೆ.

ಕರ್ನಾಟಕಕ್ಕೆ 35 ಹುದ್ದೆಗಳು ಮೀಸಲಿವೆ.

ಎಲ್ಬಿಒ ಹುದ್ದೆಗಳಿಗೆ ಕಡ್ಡಾಯವಾಗಿ ಸ್ಥಳೀಯ ಭಾಷೆಯಲ್ಲಿ ಪರಿಣಿತಿ ಹೊಂದಿರಬೇಕು. ಕರ್ನಾಟಕಕ್ಕೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಕನ್ನಡ ಭಾಷೆಯನ್ನು ತಿಳಿದಿರಬೇಕು.

ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 20. ಗರಿಷ್ಠ 30. ಮೀಸಲು ವರ್ಗಗಳಿಗೆ ವಯೋಮಾನದಲ್ಲಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ ಸಾಮಾನ್ಯ, ಒಬಿಸಿ ಅವರಿಗೆ ₹850, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ₹175. ವಿದ್ಯಾರ್ಹತೆ ಯಾವುದೇ ಪದವಿ ಪಾಸಾಗಿರಬೇಕು.

ಕಂಪ್ಯೂಟರ್ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ https://www.ucobank.com/web/guest/job-opportunities ಸಂಪರ್ಕಿಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.