ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಟಿಸಿಯಲ್ಲಿ 2,500 ಕಂಡಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಈ ನೇಮಕಾತಿ ಪ್ರಕ್ರಿಯೆಯ ಹೊಣೆ ಹೊತ್ತಿದ್ದು, ಈ ಕುರಿತು ಇತ್ತೀಚಿಗೆ ವಿವರವಾದ ಅಧಿಸೂಚನೆ ಹೊರಡಿಸಿದೆ.
Published 28 ಫೆಬ್ರುವರಿ 2024, 11:23 IST
Last Updated 28 ಫೆಬ್ರುವರಿ 2024, 11:23 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2,500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಈ ನೇಮಕಾತಿ ಪ್ರಕ್ರಿಯೆಯ ಹೊಣೆ ಹೊತ್ತಿದ್ದು, ಈ ಕುರಿತು ಇತ್ತೀಚಿಗೆ ವಿವರವಾದ ಅಧಿಸೂಚನೆ ಹೊರಡಿಸಿದೆ.

BMTC ಮಿಕ್ಕುಳಿದ ವೃಂದದಲ್ಲಿ 2286 (ಆರ್‌ಪಿಸಿ) ಹಾಗೂ ಸ್ಥಳೀಯ ವೃಂದ (ಹೈ–ಕ) 214 ಹುದ್ದೆಗಳಿದ್ದು ಒಟ್ಟಾರೆಯಾಗಿ ಮಹಿಳೆಯರಿಗೂ 825 ಹುದ್ದೆಗಳು ಮೀಸಲಿವೆ.

ಮಾರ್ಚ್ 10 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದ್ದು ಏಪ್ರಿಲ್ 10 ರಂದು ಮುಕ್ತಾಯವಾಗಲಿದೆ. cetonline.karnataka.gov.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಪಿಯುಸಿ, ಸಿಬಿಎಸ್‌ಸಿ 10+2, ಮೂರು ವರ್ಷದ ಡಿಪ್ಲೋಮಾ ಅಥವಾ ಅದಕ್ಕೆ ಸಮಾನವಾದ ಶೈಕ್ಷಣಿಕ ಅರ್ಹತೆ ಜೊತೆಗೆ ‘ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್‌’ ಅನ್ನು ಹೊಂದಿದವರು ಅರ್ಜಿ ಸಲ್ಲಿಸಬಹುದು. ಬಾಹ್ಯ ಕೋರ್ಸ್ ಮತ್ತು ಜೆಒಸಿ ಕೋರ್ಸ್‌ ಮುಗಿಸಿದವರು ಅರ್ಹರಲ್ಲ.

ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು. ಗರಿಷ್ಠ ಸಾಮಾನ್ಯ ವರ್ಗದವರಿಗೆ 35 ವರ್ಷಗಳು, 2ಎ, 2ಬಿ, 3ಎ, 3ಬಿ ಗಳಿಗೆ 38 ವರ್ಷಗಳು, ಎಸ್‌ಸಿ, ಎಸ್‌ಟಿ, ಪ್ರವರ್ಗ–1 ದವರಿಗೆ 40 ಹಾಗೂ ಮಾಜಿ ಸೈನಿಕರಿಗೆ 45 ವರ್ಷದವರೆಗೆ ಮಿತಿ ಇದೆ.

ಅರ್ಜಿ ಶುಲ್ಕ

ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ವರ್ಗದವರಿಗೆ ₹700 ಮತ್ತು ಎಸ್‌ಸಿ, ಎಸ್‌ಟಿ, ಪ್ರವರ್ಗ–1, ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ₹500.

ಅರ್ಜಿ ಸಲ್ಲಿಸಿದವರಿಗೆ ಲಿಖಿತ ಪರೀಕ್ಷೆ ಆ ನಂತರ ದೇಹದಾರ್ಡ್ಯತೆ ಪರೀಕ್ಷೆ ಇರಲಿದೆ. ಸಂದರ್ಶನ ಇರುವುದಿಲ್ಲ. ಹೆಚ್ಚಿನ ಮಾಹಿತಿಗೆ ಕೆಇಎ ಅಧಿಕೃತ ವೆಬ್‌ಸೈಟ್‌ ಪರಿಶೀಲಿಸಬಹುದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT