ಬುಧವಾರ, ಜನವರಿ 19, 2022
18 °C

ಅರಣ್ಯ ಇಲಾಖೆ: 339 ಅರಣ್ಯ ರಕ್ಷಕ ಹುದ್ದೆಗಳ ಕೀ ಉತ್ತರಗಳು ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇದ್ದ ಅರಣ್ಯ ರಕ್ಷಕ ಹುದ್ದೆಗಳ  ಸ್ಪರ್ಧಾತ್ಮಕ ಪರೀಕ್ಷೆಯ ಸರಿಯುತ್ತರಗಳನ್ನು ಇಲಾಕೆಯು ಬಿಡುಡೆಮಾಡಿದೆ.

ಅರಣ್ಯ ರಕ್ಷಕ ಹುದ್ದೆಯ ಪರೀಕ್ಷೆ ಬರೆದ ಅಭ್ಯರ್ಥಿಗಳು ಇಲಾಖೆ ವೆಬ್‌ಸೈಟ್‌ಗೆ ಭೇಟಿ ನೀಡಿ ಕೀ ಉತ್ತರಗಳನ್ನು ನೋಡಬಹುದು. ಒಟ್ಟು 339 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. 

ಕಳೆದ ಭಾನುವಾರ ಇಲಾಖೆಯು ರಾಜ್ಯದ 11 ಸ್ಥಳಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಿತ್ತು. ಈ ಪರೀಕ್ಷೆಯ ಸರಿ ಉತ್ತರಗಳನ್ನು ಪ್ರಕಟಿಸಲಾಗಿದೆ. 

ಸರಿ ಉತ್ತರಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು  ನಿಗದಿತ ನಮೂನೆಯಲ್ಲಿ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ, ಇಲಾಖೆಯ ವೆಬ್‌ಸೈಟ್‌ನಲ್ಲಿರುವ ಇ–ಮೇಲ್‌ ವಿಳಾಸಕ್ಕೆ ಕಳುಹಿಸಲು ಸೂಚಿಸಲಾಗಿದೆ.

ಓದಿವಿದ್ಯಾರ್ಥಿ ವೇತನ: ಐಸಿಎಆರ್-ಐಎಆರ್‌ಐ ಸಿಎಸ್‌ಐಆರ್ ರಿಸರ್ಚ್ ಫೆಲೊಶಿಪ್ 2021

ಇದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ಇಲಾಖೆಯ ಈ ಕೆಳಗಿನ ವೆಬ್‌ವಿಳಾಸವನ್ನು ನೋಡನಹುದು.

ವೆಬ್‌ಸೈಟ್‌: https://kfdrecruitment.in

ಓದಿಉದ್ಯೋಗ ವಾರ್ತೆ: ಡಿಆರ್‌ಡಿಒದಲ್ಲಿ ಅಪ್ರೆಂಟಿಸ್ ಹುದ್ದೆಗಳು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು