ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಚೆ | SSLC ವಿದ್ಯಾರ್ಹತೆ: 38,926 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ 

Last Updated 12 ಮೇ 2022, 10:45 IST
ಅಕ್ಷರ ಗಾತ್ರ

ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ದೇಶದಾದ್ಯಂತ 38,926 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ 2410 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆ ಹೆಸರು:ಹುದ್ದೆ ಹೆಸರು : ಗ್ರಾಮೀಣ ಡಾಕ್ ಸೇವಕ್‌
ಒಟ್ಟು ಹುದ್ದೆಗಳ ಸಂಖ್ಯೆ: 38,926
ಕರ್ನಾಟಕದಲ್ಲಿನ ಹುದ್ದೆಗಳ ಸಂಖ್ಯೆ : 2410

ವಿದ್ಯಾರ್ಹತೆ:ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಐಟಿಐ, ಡಿಪ್ಲೊಮಾ ಪಡೆದವರೂ ಅರ್ಜಿ ಸಲ್ಲಿಸಬಹುದು.ಕನ್ನಡವನ್ನು ಓದಲು, ಬರೆಯಲು, ಮಾತನಾಡಲು ತಿಳಿದಿರಬೇಕು.
ಬೇಸಿಕ್ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವೇತನ: ಮಾಸಿಕ ವೇತನದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್‌ ನೋಡಬಹುದು.

ವಯಸ್ಸು:ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆ ದಿನಾಂಕಕ್ಕೆ ಸರಿಯಾಗಿ ಅಭ್ಯರ್ಥಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 40 ವರ್ಷ ಮೀರಿರಬಾರದು.

ವಯೋಮಿತಿ:ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಇದೆ.

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳು ರೂ.100 ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ / ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯ್ತಿ ಇದೆ.

ನೇಮಕ, ಅರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಬಳಿಕಮೆರಿಟ್ ಪಟ್ಟಿ ತಯಾರಿಸಿ ನೇಮಕಾತಿ ಮಾಡಿಕೊಳ್ಳಲಾಗುವುದು.

ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 05-06-2022

ವೆಬ್‌ಸೈಟ್‌:https://indiapostgdsonline.gov.in

ಅಧಿಸೂಚನೆ ಲಿಂಕ್‌:https://indiapostgdsonline.cept.gov.in/Notifications/Model_Notification.pdf

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT