4ನೇ,10ನೇ ತರಗತಿ ಪಾಸು: 194 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ನೇಮಕಾತಿ

ಶಿವಮೊಗ್ಗ/ರಾಯಚೂರು: ಈ ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಸಲ್ಲಿಸಬೇಕು.
ಅಂಗನವಾಡಿ ಕಾರ್ಯಕರ್ತೆಯಾಗಲು ಹತ್ತನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯರಾಗಲು ಕನಿಷ್ಠ 4ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು.
ಹುದ್ದೆಗಳ ವಿವರ
ಶಿವಮೊಗ್ಗ
1) ಅಂಗನವಾಡಿ ಕಾರ್ಯಕರ್ತೆ: 46
2) ಅಂಗನವಾಡಿ ಸಹಾಯಕಿ: 101
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 12-08-2021
***
ರಾಯಚೂರು
1) ಅಂಗನವಾಡಿ ಕಾರ್ಯಕರ್ತೆ: 12
2) ಅಂಗನವಾಡಿ ಸಹಾಯಕಿ: 35
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 13-08-2021
ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು
1 ಮಾಹಿತಿಯನ್ನು ಭರ್ತಿ ಮಾಡಿದ ಅರ್ಜಿ (ಆನ್‌ಲೈನ್ )
2 ಜನನ ಪ್ರಮಾಣ ಪತ್ರ /ಜನ್ಮದಿನಾಂಕ ಇರುವ ಎಸ್ಎಸ್‌ಎಲ್‌ಸಿ ಅಂಕಪಟ್ಟಿ
3 ತಹಶೀಲ್ದಾರರು /ಉಪತಹಶೀಲ್ದಾರರು ಪಡೆದ 1 ವರ್ಷದೊಳಗಿನ ವಾಸಸ್ಥಳ ದೃಢೀಕರಣ
4 ಅಗತ್ಯ ಶೈಕ್ಷಣಿಕ ದಾಖಲೆ ಪತ್ರಗಳುನ್ನು ಲಗತ್ತಿಸಬೇಕು.
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು.
ಅರ್ಜಿ ಸಲ್ಲಿಸುವ ವೆಬ್‌ಸೈಟ್: https://anganwadirecruit.kar.nic.in
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.