ಅಫಜಲಪುರ: ‘ನಮ್ಮ ಪರಿಸರವನ್ನು ಸ್ವಚ್ಛವಾಗಿಡುವ ಮೂಲಕ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಇವರು ಸಮಾಜದ ‘ನೈಜ ಶ್ರಮಜೀವಿಗಳು’ ಹಾಗೂ ‘ಆರೋಗ್ಯ ರಕ್ಷಕರು’ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಮಾಜಿ ನಿರ್ದೇಶಕ ಶಿವಶರಣಪ್ಪ ನಂದಗಿರಿ ತಿಳಿಸಿದರು.

ಪಟ್ಟಣದ ಪುರಸಭೆಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಸಂಗಮ್ಮ ಶಂಕರ ಚಲವಾದಿಯವರ ನಿವೃತ್ತಿ ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಿ ಮಾತನಾಡಿ, ‘ಸಂಗಮ್ಮ ಅವರ ನಿವೃತ್ತಿ ಜೀವನ ಸುಖಕರವಾಗಿರಲಿ’ ಎಂದು ಹಾರೈಸಿದರು.

ಡಾ.ಬಿ.ಆರ್.ಅಂಬೇಡ್ಕರ್ ರಾಜ್ಯ ಪ್ರಶಸ್ತಿ ಪುರಸ್ಕೃತ ಹನುಮಂತರಾವ ದೊಡ್ಡಮನಿ ಮಾತನಾಡಿ, ‘ಸಂಗಮ್ಮ ಅವರು 35 ವರ್ಷ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸಿ ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣವನ್ನು ಕೊಡಿಸಿದ್ದು, ಇತರರಿಗೆ ಮಾದರಿಯಾಗಿದೆ’ ಎಂದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಜಿಲ್ಲಾ ಯೋಜನಾ ನಿರ್ದೇಶಕ ಮೂನಾವರ್ ದವಲಾ ಹಾಗೂ ನಗರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚಂದ್ರಶೇಖರ ಕರಜಿಗಿ ಅವರು ಮಾತನಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಂಗಮ್ಮ ಅವರು, ‘ನನ್ನ ಸೇವಾವಧಿಯಲ್ಲಿ ನನಗೆ ಪುರಸಭೆಯ ಎಲ್ಲಾ ಅಧಿಕಾರಿ ವರ್ಗದವರು ಮತ್ತು ಸಹ ನೌಕರರು ಸಹಕಾರ ನೀಡಿದ್ದಾರೆ’ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದರು.

ಕಾರ್ಯಕ್ರಮದಲ್ಲಿ ಪುರಸಭೆ ವ್ಯವಸ್ಥಾಪಕ ಜೆಟ್ಟೆಪ್ಪ ಜಾಮಗೂಂಡ, ರವಿ ನಂದಶೆಟ್ಟಿ, ರಾಜಶೇಖರ ಪಾಟೀಲ, ಮಲ್ಲಯ್ಯ ಹೊಸಮಠ, ವಿಶ್ವನಾಥ ಮಲಗಣ, ತಾಲ್ಲೂಕು ಪೌರ ನೌಕರರ ಸಂಘದ ಅಧ್ಯಕ್ಷ ಸಂತೋಷ ಚಲವಾದಿ, ಕಲಬುರಗಿ ವಿಭಾಗದ ಉಪಾಧ್ಯಕ್ಷ ಮತ್ತಣ್ಣ ಬಂಡಾರಿ ಸೇರಿ ಇತರರು ಇದ್ದರು. ಪುರಸಭೆಯ ಅಧಿಕಾರಿ ಮಲ್ಲಿನಾಥ ಕಾಮದಿ ಸ್ವಾಗತಿಸಿ, ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-31-774781671

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.