ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ), ಫೆಬ್ರುವರಿ 2022ರಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್ ಹುದ್ದೆಗಳ(ಗ್ರೇಡ್ –1) ಭರ್ತಿಗಾಗಿ ಅರ್ಜಿ ಆಹ್ವಾನಿಸಿತ್ತು. ಅರ್ಜಿ ಸಲ್ಲಿಸಲು ಮಾರ್ಚ್ 30 ಕೊನೆ ದಿನವಾಗಿತ್ತು. ನಂತರ ಅರ್ಜಿ ಸಲ್ಲಿಕೆಯ ಕೊನೆ ದಿನವನ್ನು ಮೊದಲ ಬಾರಿಗೆ ಏಪ್ರಿಲ್ 18ರವರೆಗೆ ವಿಸ್ತರಿಸಿತ್ತು. ಈಗ ಪುನಃ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿ, ಅಧಿಸೂಚನೆ ಹೊರಡಿಸಿದೆ.

ಫೆಬ್ರುವರಿಯಲ್ಲಿ ಅಧಿಸೂಚನೆ ಹೊರಡಿಸಿದ್ದ ವೇಳೆ 129 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಈಗ ಹೊಸದಾಗಿ 100 ಹುದ್ದೆಗಳನ್ನು ಸೇರಿಸಿ, ಅಧಿಸೂಚನೆ ಪರಿಷ್ಕರಿಸಿ ಒಟ್ಟು 229 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಸೆ. 2ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಸೆ. 30 ಅರ್ಜಿ ಸಲ್ಲಿಕೆಗೆ ಕೊನೆ ದಿನ. ಅ.1, ಶುಲ್ಕ ಪಾವತಿಗೆ ಕೊನೆ ದಿನ ಎಂದು ಪರಿಷ್ಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಗಮನಿಸಿ:21ಫೆಬ್ರುವರಿ 2022ರ ಅಧಿಸೂಚನೆಯ ಅನ್ವಯ ಇದೇ ಹುದ್ದೆಗೆ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಮಾತ್ರ ಈಗ ಅರ್ಜಿ ಸಲ್ಲಿಸಬೇಕು. ಈಗಾಗಲೇ ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಸಲ್ಲಿಸುವ ಅಗತ್ಯವಿಲ್ಲ.

ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ನಾಗರಿಕ/ಪರಿಸರ ವಿಷಯದಲ್ಲಿ ಬಿ.ಇ ಪೂರ್ಣಗೊಳಿಸಿರಬೇಕು.

ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು, ಗರಿಷ್ಠ 35 ವರ್ಷಗಳು. ಪರಿಶಿಷ್ಟ ಜಾತಿ ಮತ್ತು ಪರಿಷ್ಟವರ್ಗ, ಕೆಟಗರಿ–1ರ ಅಭ್ಯರ್ಥಿಗಳಿಗೆ 5 ವರ್ಷಗಳು, ಕೆಟಗರಿ 2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ, ಕೆಟಗರಿ–1/ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಕೆಟಗರಿ -2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ₹ 300. ಸಾಮಾನ್ಯ ಅಭ್ಯರ್ಥಿಗಳಿಗೆ ₹600. ಪ್ರೊಸಸಿಂಗ್ ಶುಲ್ಕ(ಎಲ್ಲ ಅಭ್ಯರ್ಥಿಗಳಿಗೆ) ₹35.

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿಯಲ್ಲಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ನಮೂದಿಸಬೇಕು. ಈ ಹಿನ್ನೆಲೆಯಲ್ಲಿ ಇಮೇಲ್ ಐಡಿ ಇಲ್ಲದಿದ್ದರೆ ಕ್ರಿಯೇಟ್ ಮಾಡಿಕೊಳ್ಳಬೇಕು. ಕಡ್ಡಾಯವಾಗಿ ಮೊಬೈಲ್ ಸಂಖ್ಯೆ ಹೊಂದಿರಬೇಕು. ಹಾಗೆಯೇ ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬೇಕು. ಅರ್ಜಿ ಸಲ್ಲಿಸುವ ಜಾಲತಾಣ: https://www.kpscrecruitment.in/RPS/Home.aspx

ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಪರಿಷ್ಕೃತ ಅಧಿಸೂಚನೆಗಾಗಿ ಇಲಾಖೆ ವೆಬ್‌ಸೈಟ್ ನೋಡಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.