ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IOCLನಲ್ಲಿ 469 ಟ್ರೇಡ್‌ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ

Last Updated 13 ಅಕ್ಟೋಬರ್ 2021, 7:41 IST
ಅಕ್ಷರ ಗಾತ್ರ

ಮುಂಬೈ: ಇಂಡಿಯನ್ ಆಯಿಲ್ ಕಾರ್ಪೊರೇಶನ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ 469 ಟ್ರೇಡ್‌ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ನೇಮಕಾತಿಗೊಂಡ ಅಭ್ಯರ್ಥಿಗಳು ಭಾರತದ ಯಾವುದೇ ರಾಜ್ಯಗಳಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಟ್ರೇಡ್‌ ಅಪ್ರೆಂಟಿಸ್‌ಗಳಸಂಖ್ಯೆ: 469

ಟ್ರೇಡ್‌ಗಳು: ಫಿಟ್ಟರ್‌, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್, ಮೆಕಾನಿಕ್‌, ಇನ್‌ಸ್ಟ್ರೂಮೆಂಟ್ ಮೆಕಾನಿಕ್‌, ಮೆಕಾನಿಸ್ಟ್ ಟ್ರೇಡ್‌

ವಿದ್ಯಾರ್ಹತೆ: ಹುದ್ದೆಗಳಿಗೆ ಅನುಸಾರವಾಗಿ ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೋಮಾ, ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಅಕ್ಟೋಬರ್‌ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 28 ವರ್ಷ ವಯಸ್ಸಾಗಿರಬೇಕು.

ಅರ್ಜಿ ಶುಲ್ಕ: ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ

ನೇಮಕಾತಿ: ಕೌಶಲ್ಯ ಅಥವಾ ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳನ್ನು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ತರಬೇತಿ ಭ್ಯತೆ, ನೇಮಕಾತಿ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅಭ್ಯರ್ಥಿಗಳು ಇಂಡಿಯನ್ ಆಯಿಲ್ ಕಾರ್ಪೊರೇಶನ್‌ ಲಿಮಿಟೆಡ್‌ನ https://www.iocl.com ವೆಬ್‌ಸೈಟ್‌ ನೋಡಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: 25 ಅಕ್ಟೋಬರ್‌ 2021

ವೆಬ್‌ಸೈಟ್‌: https://www.iocl.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT