ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕ ವಿಮಾ ನಿಗಮದಲ್ಲಿ 3865 ಹುದ್ದೆಗಳು: ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ

Last Updated 11 ಜನವರಿ 2022, 11:58 IST
ಅಕ್ಷರ ಗಾತ್ರ

ಭಾರತ ಸರ್ಕಾರದ ಕಾರ್ಮಿಕಾ ವಿಮಾ ನಿಗಮವು 3865 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ತಿದ್ದುಪಡಿ ಅಧಿಸೂಚನೆ ಹೊರಡಿಸಿದ್ದು ಕನ್ನಡ ಭಾಷೆಯಲ್ಲೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ.

ಕಳೆದ ಡಿಸೆಂಬರ್ 27 ರಂದು 3865 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ರಾಜ್ಯದ ಅಭ್ಯರ್ಥಿಗಳು ಹಿಂದಿ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಪರೀಕ್ಷೆ ಬರೆಯಬೇಕಿತ್ತು ಎಂದು ಸೂಚಿಸಿತ್ತು. ಇದರಿಂದ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಕಾರ್ಮಿಕರ ರಾಜ್ಯ ವಿಮಾ ನಿಗಮವು ಇದೀಗ ತಿದ್ದುಪಡಿ ಅಧಿಸೂಚನೆ ಹೊರಡಿಸಿದ್ದು ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ. ಇದರಿಂದ ರಾಜ್ಯದ ಲಕ್ಷಾಂತರ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ.

ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆಯ ಭಾಷೆ ಮಾಧ್ಯಮದಲ್ಲಿ ಬದಲಾವಣೆ ಮಾಡಿರುವ ಇಲಾಖೆಯು ಹಿಂದಿ ಜತೆಗೆ ಇತರ ಪ್ರಾದೇಶಿಕ ಭಾಷೆಗಳಲ್ಲೂ ಪರೀಕ್ಷೆ ಬರೆಯಬಹುದಾಗಿದೆ. ಕರ್ನಾಟಕ ವಲಯದಲ್ಲಿ ಕನ್ನಡ, ಕೊಂಕಣಿ, ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ಪರೀಕ್ಷೆ ಬರೆಯಬಹುದು

ಕರ್ನಾಟಕದಲ್ಲಿ 282 ಒಟ್ಟು ಹುದ್ದೆಗಳು ಖಾಲಿ ಇವೆ. ಇವುಗಳಲ್ಲಿ ಕ್ಲರ್ಕ್‌, ಸ್ಟೆನೋಗ್ರಾಫರ್ ಸೇರಿದಂತೆ ನಾನಾ ಹುದ್ದೆಗಳು ಇವೆ.

ವೆಬ್‌ಸೈಟ್ ವಿಳಾಸ:https://www.esic.nic.in

ಹೆಚ್ಚಿನ ಮಾಹಿತಿಗೆ ಈ ಸುದ್ದಿಯನ್ನುಓದಿ: SSLC,PUC,DEGREE ಪಾಸ್‌ | ವೇತನ ₹25,000: ESICಯಲ್ಲಿ 3847 ಹುದ್ದೆಗಳಿಗೆ ಅರ್ಜಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT