ಅರಸೀಕೆರೆ: ನಗರದ ಇನ್ನರ್ ವೀಲ್ ಕ್ಲಬ್ ವತಿಯಿಂದ ಅಧ್ಯಕ್ಷೆ ರಂಜಿತಾ ನೇತೃತ್ವದಲ್ಲಿ ಪದಾಧಿಕಾರಿಗಳು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಮಿಕರ ಬಗ್ಗೆ ಕೇವಲ ಕಾರ್ಮಿಕ ದಿನಾಚರಣೆ ದಿನಕ್ಕೆ ಕಳಕಳಿ ಸೀಮಿತವಾಗಬಾರದು ಎಂಬ ಆಶಯದೊಂದಿಗೆ ಕಟ್ಟಡ ನಿರ್ಮಾಣ ಕಾರ್ಮಿಕರು ಕೆಲಸದಲ್ಲಿ ತೊಡಗಿರುವ ಸ್ಥಳಕ್ಕೆ ತೆರಳಿ ಮಧ್ಯಾಹ್ನದ ಉಪಾಹಾರವನ್ನು ನೀಡಿ, ಕಾರ್ಮಿಕರಿಗೆ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಆತ್ಮಸ್ಥೈರ್ಯ ತುಂಬಿದರು.

ಕಾರ್ಮಿಕರು ದುಶ್ಚಟಗಳಿಗೆ ದಾಸರಾಗಬಾರದು. ಇದರಿಂದ ಕುಟುಂಬದ ನೆಮ್ಮದಿ ಹಾಳಾಗುತ್ತದೆ. ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ತಿಳಿ ಹೇಳಿದರು.

ಇತ್ತೀಚಿಗೆ ಶಾಲಾ– ಕಾಲೇಜು ವಿದ್ಯಾರ್ಥಿಗಳು ಮಾದಕವಸ್ತುಗಳ ಬಳಕೆ ಮಾಡುತ್ತಿದ್ದು, ಆರೋಗ್ಯದ ಮೇಲೆ ಮತ್ತು ಓದಿನ ಮೇಲೆ ದುಷ್ಪರಿಣಾಮ ಆಗುತ್ತಿದ್ದು, ಈ ನಿಟ್ಟಿನಲ್ಲಿಯೂ ಜಾಗೃತಿ ಮೂಡಿಸುವ ಉದ್ದೇಶದಿಂದ ಶಾಲಾ– ಕಾಲೇಜುಗಳಿಗೆ ಜಾಗೃತಿ ಫಲಕವನ್ನು ಅಳವಡಿಸುವ ಕಾರ್ಯ ಮಾಡಲಾಯಿತು. ಅರಸೀಕೆರೆ ನಗರದ ಗ್ರಾಮ ದೇವತೆಗಳಾದ ಕರಿಯಮ್ಮ, ಮಲ್ಲಿಗೆಮ್ಮ ಜಾತ್ರಾ ಮಹೋತ್ಸವದಲ್ಲಿಯೂ ದೇವಾಲಯ ಆವರಣದಲ್ಲಿ ಭಕ್ತರು ಬಿಸಿಲಿನ ಬೇಗೆಯಿಂದ ದಣಿವಾರಿಸಿಕೊಳ್ಳಲು ಮಜ್ಜಿಗೆ, ಕೋಸಂಬರಿ ಹಾಗೂ ಬೀಸಣಿಗೆಗಳನ್ನು ವಿತರಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಕ್ಲಬ್ ಅಧ್ಯಕ್ಷೆ ರಂಜಿತಾ, ನಮ್ಮ ಕ್ಲಬ್ ಸಮಾಜಮುಖಿಯಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದೆ. ಶಿಕ್ಷಣ, ಆರೋಗ್ಯ, ನೈರ್ಮಲ್ಯ, ಪರಿಸರ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯುತ್ತಿವೆ ಎಂದರು.

ಕ್ಲಬ್ನ ಪದಾಧಿಕಾರಿಗಳಾದ ಲಕ್ಷ್ಮಿ , ಶೀಲಾ, ಓಂಕಾರಮ್ಮ, ನಾಗರತ್ನಮ್ಮ, ಸಂಧ್ಯಾ, ಶ್ವೇತಾ, ಶಕುಂತಲಾ, ಸವಿತಾ, ರೋಹಿಣಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-36-1350125984

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.