ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇನಾ ಪ್ರವೇಶ ಪರೀಕ್ಷೆ 25ಕ್ಕೆ

Last Updated 16 ಜುಲೈ 2021, 20:35 IST
ಅಕ್ಷರ ಗಾತ್ರ

ಬೆಂಗಳೂರು: ಭಾರತೀಯ ಸೇನೆಯು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯು (ಸಿಇಇ) ಇದೇ 25ರಂದು ರಾಜ್ಯದ ಮೂರು ಕೇಂದ್ರಗಳಲ್ಲಿ ನಡೆಯಲಿದೆ.

ದೈಹಿಕ ಸಾಮರ್ಥ್ಯ ಮತ್ತು ವೈದ್ಯಕೀಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಲಿಖಿತ ಪರೀಕ್ಷೆಗೆ ಹಾಜರಾಗಬಹುದು. ಬೆಂಗಳೂರಿನ ಕಾಮರಾಜ ರಸ್ತೆಯಲ್ಲಿರುವ ಸೇನಾ ಶಾಲೆ, ಮಂಗಳೂರಿನ ಮೂಡುಬಿದಿರೆಯಲ್ಲಿರುವ ಆಳ್ವಾಸ್‌ ಸಂಸ್ಥೆ, ಬೆಳಗಾವಿಯ ಕೆಎಲ್‌ಇ ಸೊಸೈಟಿ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಸೇನಾ ಪ್ರಕಟಣೆ ತಿಳಿಸಿದೆ.

ಈ ಮೊದಲು, ಏಪ್ರಿಲ್‌ 25ರಂದು ಸಿಇಇ ನಿಗದಿಯಾಗಿತ್ತು. ಆದರೆ, ಕೋವಿಡ್ ಕಾರಣದಿಂದ ಮುಂದೂಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT