ಬೆಂಗಳೂರು: ‘ರಾಜ್ಯದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್ (ಎಪಿಪಿ) ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ’ ಎಂದು ರಾಜ್ಯ ಸರ್ಕಾರ, ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತ ಅರ್ಜಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರದ ಪರ ವಕೀಲರು ಪ್ರಮಾಣ ಪತ್ರದ ಮೂಲಕ ನ್ಯಾಯಪೀಠಕ್ಕೆ ಈ ಮಾಹಿತಿ ಒದಗಿಸಿದರು.

‘ಖಾಲಿ ಇರುವ 205 ಹುದ್ದೆಗಳ ಭರ್ತಿ ಮಾಡಲಾಗುವುದು. ಈ ತಿಂಗಳ ಅಂತ್ಯದಲ್ಲಿ ಅಭ್ಯರ್ಥಿಗಳ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಜಿಲ್ಲಾ ನ್ಯಾಯಾಧೀಶರ ನೇತ್ವತ್ವದ ಸಮಿತಿ 205 ಕಾನೂನು ಪದವೀಧರರನ್ನು ಅವರ ಜ್ಯೇಷ್ಠತೆ ಆಧರಿಸಿ ಆಯ್ಕೆ ಮಾಡಲಿದೆ. ಈ ಕುರಿತ ಪ್ರಸ್ತಾವ ಪ್ರಾಸಿಕ್ಯೂಷನ್ ಇಲಾಖೆ ಮುಂದಿದೆ’ ಎಂದು ಸರ್ಕಾರದ ವಕೀಲರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.