ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Cochin Shipyard: 136 ಎಂಜಿನಿಯರಿಂಗ್‌ ಹುದ್ದೆಗಳಿಗೆ ಅರ್ಜಿ

Last Updated 3 ಮಾರ್ಚ್ 2022, 12:34 IST
ಅಕ್ಷರ ಗಾತ್ರ

ಕೊಚ್ಚಿನ್‌ ಶಿಪ್‌ಯಾರ್ಡ್‌ನಲ್ಲಿ ಖಾಲಿ ಇರುವ ಗ್ರಾಜುಯೇಟ್ ಅಪ್ರೆಂಟಿಸ್ ಮತ್ತು ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 136 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.

ಹುದ್ದೆಗಳ ಸಂಖ್ಯೆ: 136 ಹುದ್ದೆಗಳು

ವಿದ್ಯಾರ್ಹತೆ: ಡಿಪ್ಲೊಮಾ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್‌ ಪದವಿ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ನೋಡುವುದು.

ವಯೋಮಿತಿ: ಹುದ್ದೆಗಳಿಗೆ ಅನುಸಾರ ಕೊಚ್ಚಿನ್‌ ಶಿಪ್‌ಯಾರ್ಡ್‌ ಪ್ರಕಟಿಸಿರುವ ವಯೋಮಿತಿಯ ಅರ್ಹತೆ ಪಡೆದಿರಬೇಕು. ಇದರ ಮಾಹಿತಿಗೆ ವೆಬ್‌ಸೈಟ್‌ ನೋಡುವುದು.

ವೇತನ ಶ್ರೇಣಿ: ತರಬೇತಿ ಸಮಯದಲ್ಲಿ ಭತ್ಯೆ ನೀಡಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಬಳಿಕ ₹ 21,700- ₹69,100 ವೇತನ ನಿಡಲಾಗುವುದು.

ನೇಮಕಾತಿ ವಿಧಾನ: ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಹಾಗೂ ದೈಹಿಕ ಕ್ಷಮತೆ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಕಂಪ್ಯೂಟರ್‌ ಆಧಾರಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಗೆ ಕರೆಯಲಾಗುವುದು.

ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 09–03–2022

ವೆಬ್‌ಸೈಟ್:https://cochinshipyard.in/

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT