ಬಳ್ಳಾರಿ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ-ಯುವತಿಯರು ಸ್ವಯಂ ಉದ್ಯೋಗದ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ವಿವಿಧ ವೃತ್ತಿಪರ ತರಬೇತಿಗಳಿಗೆ ಅರ್ಜಿ ಆಹ್ವಾನಿಸಿದೆ.

ಗ್ರಾಮೀಣ ಪ್ರದೇಶದ 19 ರಿಂದ 45 ವರ್ಷ ವಯೋಮಿತಿಯ ಆಸಕ್ತ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ತರಬೇತಿಗಳನ್ನು ಆಯೋಜಿಸಲಾಗಿದೆ.

ತರಬೇತಿಗಳ ವಿವರ: ಏ.6 ರಿಂದ 30 ದಿನ ಮೊಬೈಲ್ ಸರ್ವಿಸಿಂಗ್, ಏ.9 ರಿಂದ 14 ದಿನ ಕೃತಕ ಆಭರಣ ತಯಾರಿಕೆ ತರಬೇತಿ, ಏ.15 ರಿಂದ 13 ದಿನ ಕೃಷಿ ಉದ್ಯಮಿ ತರಬೇತಿ, ಏ.14 ರಿಂದ 12 ದಿನ ಅಗರಬತ್ತಿ ತಯಾರಿಕೆ ತರಬೇತಿ, ಮೇ 4 ರಿಂದ 30 ದಿನ ಮೋಟಾರ್ ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿ, ಮೇ 18 ರಿಂದ 30 ದಿನ ಫೋಟೊಗ್ರಫಿ ಮತ್ತು ವಿಡಿಯೊಗ್ರಫಿ ತರಬೇತಿ, ಮೇ 25 ರಿಂದ 14 ದಿನ ಫಾಸ್ಟ್ಫುಡ್ ತಯಾರಿಕೆ ತರಬೇತಿ, ಜೂನ್ 04 ರಿಂದ 35 ದಿನ ಬ್ಯೂಟಿ ಪಾರ್ಲರ್ ತರಬೇತಿ ನೀಡಲಾಗುತ್ತದೆ.

ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ತೇರ್ಗಡೆಯಾಗಿರಬೇಕು. ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್ ಪ್ರತಿ, ಉದ್ಯೋಗ ಖಾತ್ರಿ ಕಾರ್ಡ್, 3 ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಸಲ್ಲಿಸಬೇಕು. ಮಾಹಿತಿಗೆ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಡಿ.ಐ.ಸಿ ಕಾಂಪೌಂಡ್, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹತ್ತಿರ, ಹೊಸಪೇಟೆ ರಸ್ತೆ, ಬಳ್ಳಾರಿ. ದೂ.08392-299117, ಮೊ.9449860659, 9008464120, 9980123603 ಗೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-25-1513085355

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.