ಬಳ್ಳಾರಿ: ನಗರದ ರೇಡಿಯೋ ಪಾರ್ಕ್ನಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ 26 ರಂದು ಬೆಳಿಗ್ಗೆ 9 ಗಂಟೆಗೆ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿದೆ. ಬೆಂಗಳೂರಿನ ನರಸಾಪುರದ ಹೋಂಡಾ ಮೋಟಾರ್ ಸೈಕಲ್ ಕಂಪನಿಯಲ್ಲಿ ಅಪ್ರೆಂಟಿಸ್ ತರಬೇತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಫಿಟ್ಟರ್, ಎಲೆಕ್ಟ್ರಿಷಿಯನ್ ಸೇರಿದಂತೆ ವಿವಿಧ ತಾಂತ್ರಿಕ ವೃತ್ತಿಗಳಲ್ಲಿ ಐಟಿಐ ಪೂರ್ಣಗೊಳಿಸಿದ ಅಥವಾ ಅಂತಿಮ ವರ್ಷದಲ್ಲಿರುವ 18 ವರ್ಷ ಮೇಲ್ಪಟ್ಟವರು ಭಾಗವಹಿಸಬಹುದು. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ವೈದ್ಯಕೀಯ ತಪಾಸಣೆಯನ್ನು ಒಳಗೊಂಡಿರುತ್ತದೆ. ಆಸಕ್ತರು ಎಸ್ಎಸ್ಎಲ್ಸಿ ಹಾಗೂ ಐಟಿಐ ಅಂಕಪಟ್ಟಿ, ಆಧಾರ್ ಕಾರ್ಡ್, ಬಯೋಡೇಟಾ, ಭಾವಚಿತ್ರ ಮತ್ತು ಸ್ಮಾರ್ಟ್ ಫೋನ್ನೊಂದಿಗೆ ಹಾಜರಾಗಲು ಸಂಸ್ಥೆಯ ಪ್ರಾಚಾರ್ಯ ಕೆ.ಹೆಚ್.ಎಂ. ಪಂಡಿತಾರಾಧ್ಯ ಕೋರಿದ್ದಾರೆ.

ನಿಗದಿತ ದಿನಾಂಕದಂದು ಅರ್ಹ ಅಭ್ಯರ್ಥಿಗಳು ಈ ಸದವಕಾಶವನ್ನು ಬಳಸಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-25-50822770

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.