ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಮೆಟ್ರೊ ರೈಲು: ವಿವಿಧ ಹುದ್ದೆಗಳಿಗೆ ಅರ್ಜಿ

Last Updated 22 ಫೆಬ್ರವರಿ 2023, 19:30 IST
ಅಕ್ಷರ ಗಾತ್ರ

ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL), ಖಾಲಿಯಿರುವ ಆರು ವಿವಿಧ ಎಂಜಿನಿಯರ್‌ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆ ದಿನ ಮಾರ್ಚ್ 14. ಅಗತ್ಯ / ಪೂರಕ ದಾಖಲೆಗಳೊಂದಿಗೆ ಸಹಿ ಮಾಡಿದ ಮುದ್ರಿತ ಅರ್ಜಿ ಸಲ್ಲಿಸಲು ಮಾರ್ಚ್‌ 18 ಕೊನೆ ದಿನ.

ಅರ್ಜಿಗಳನ್ನು ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೊ ರೈಲು ಕಾರ್ಪೊರೇಷನ್ ಲಿಮಿಟೆಡ್, 3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಎಚ್‌. ರಸ್ತೆ, ಶಾಂತಿನಗರ, ಬೆಂಗಳೂರು 560 027 – ಈ ವಿಳಾಸಕ್ಕೆ ಕಳಿಸಬಹುದು. ಲಕೋಟೆ ಮೇಲೆ ಯಾವ ಹುದ್ದೆಗೆ ಅರ್ಜಿ ಎನ್ನುವುದನ್ನು ಉಲ್ಲೇಖಿಸಬೇಕು.

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಮತ್ತು ಸುರಕ್ಷತೆ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ OSHA/NEBOSH/IOSHA ದಲ್ಲಿ ಡಿಪ್ಲೊಮಾ ಪಡೆದಿರಬೇಕು. ಅಥವಾ

ಬಿ.ಇ/ಬಿ.ಟೆಕ್‌(ಸಿವಿಲ್‌/ಮೆಕ್ಯಾನಿಕಲ್/ಎನ್ವಿರಾನ್ಮೆಂಟ್‌) ಪದವಿ ಪಡೆದಿರಬೇಕು. ಇದರ ಜೊತೆಗೆ ಸುರಕ್ಷತೆ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ OSHA/NEBOSH/IOSHA ದಲ್ಲಿ ಡಿಪ್ಲೊಮಾ ಪಡೆದಿರುವವರಿಗೆ ಆದ್ಯತೆ. ಇದು ಮೂರು ವರ್ಷದ ಗುತ್ತಿಗೆ ಆಧಾರಿತ ಉದ್ಯೋಗವಾಗಿದೆ.

ವಯೋಮಿತಿ: ಬಿಎಂಆರ್‌ಸಿಎಲ್‌ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ 40 ವರ್ಷ ಗರಿಷ್ಠ ವಯಸ್ಸು 55 ವರ್ಷಗಳು. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿ ಹಾಗೂ ಅಧಿಸೂಚನೆಗಾಗಿ ಬಿಎಂಆರ್‌ಸಿಎಲ್ ಜಾಲತಾಣ: https://english.bmrc.co.in/#/career ಗೆ ಭೇಟಿ ನೀಡಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT