ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್ ಉದ್ಯೋಗ ಪರೀಕ್ಷೆಗೆ ತಯಾರಾಗಿ

ಆರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 6,432 ಹುದ್ದೆಗಳು
Last Updated 11 ಆಗಸ್ಟ್ 2022, 1:58 IST
ಅಕ್ಷರ ಗಾತ್ರ

ದೇಶದ ಆರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಪ್ರೊಬೆಷನರಿ ಆಫೀಸರ್ಸ್‌/ ಮ್ಯಾನೇಜ್‌ಮೆಂಟ್‌ ಟ್ರೈನಿ ಹುದ್ದೆಗಳ ಭರ್ತಿಗಾಗಿ ಐಬಿಪಿಎಸ್‌ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದೆ. ಪರೀಕ್ಷೆಯ ವಿವರ ಇಲ್ಲಿದೆ.

ದೇಶದಾದ್ಯಂತ ಆರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿ ಇರುವ 6,432 ಪ್ರೊಬೆಷನರಿ ಆಫೀಸರ್ಸ್‌/ ಮ್ಯಾನೇಜ್‌ಮೆಂಟ್‌ ಟ್ರೈನಿ ಹುದ್ದೆಗಳ ಭರ್ತಿಗಾಗಿಬ್ಯಾಂಕ್ಸಿಬ್ಬಂದಿ ನೇಮಕಾತಿ ಸಂಸ್ಥೆ(ಐಬಿಪಿಎಸ್‌) ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದೆ.ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಒಟ್ಟು ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಯವರಿಗೆ(ಎಸ್‌.ಸಿ) 996, ಪರಿಶಿಷ್ಟ ಪಂಗಡದವರಿಗೆ(ಎಸ್‌ಟಿ) 483, ಹಿಂದುಳಿದ ವರ್ಗದವರಿಗೆ (ಒಬಿಸಿ) 1741, ಸಾಮಾನ್ಯ ವರ್ಗದವರಿಗೆ 2,596 ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ(ಇಡಬ್ಲುಎಸ್‌) 616 ಹುದ್ದೆಗಳನ್ನು ಮೀಸಲಿಡಲಾಗಿದೆ.

ಕರ್ನಾಟಕದ 14 ಜಿಲ್ಲಾ ಕೇಂದ್ರಗಳಲ್ಲಿ ಆನ್‌ಲೈನ್‌ ಮೂಲಕ ಪೂರ್ವಭಾವಿ ಪರೀಕ್ಷೆ ಮತ್ತು 3 ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯಪರೀಕ್ಷೆ ನಡೆಯಲಿದೆ. ಇದೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಪೂರ್ವಭಾವಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

ನೆನಪಿಡಿ: ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ನಮೂನೆಯಲ್ಲಿಿರುವ ಬ್ಯಾಂಕಿನ ಆದ್ಯತೆ ಆಯ್ಕೆಯ ಆದೇಶ ಕ್ರಮವನ್ನು ಅಗತ್ಯವಾಗಿ ಸೂಚಿಸಬೇಕು. ಹಾಗೆಯೇ, ಒಬಿಸಿ ವರ್ಗಕ್ಕೆ ಸೇರಿದ ಆದರೆ ಕೆನೆ ಪದರದ ಅಡಿಯಲ್ಲಿ ಬರುವ ಅಭ್ಯರ್ಥಿಗಳು ಒಬಿಸಿ ಮೀಸಲಾತಿಗೆ ಅರ್ಹರಾಗಿರುವುದಿಲ್ಲ. ಅವರು ಅರ್ಜಿ ನಮೂನೆಯಲ್ಲಿ ತಮ್ಮ ವರ್ಗವನ್ನು ಸಾಮಾನ್ಯ ಎಂದು ಸೂಚಿಸಬೇಕು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಅಭ್ಯರ್ಥಿಯು ಕಾಲಕಾಲಕ್ಕೆ ‘ಕೆನೆಪದರ ರಹಿತ’ (Non cremy layer) ಎಂಬ ಷರತ್ತಿನೊಂದಿಗೆ ಒಬಿಸಿ ಪ್ರಮಾಣಪತ್ರವನ್ನು ಹೊಂದಿರಬೇಕು.

ಅಭ್ಯರ್ಥಿಗಳ ಆಯ್ಕೆ ವಿಧಾನ

ಮೊದಲ ಹಂತದಲ್ಲಿ ಪೂರ್ವಭಾವಿ ಪರೀಕ್ಷೆ (ಪ್ರಿಲಿಮ್ಸ್) ನಡೆಯಲಿದೆ. ಬೆಳಗಾವಿ, ಬೆಂಗಳೂರು, ಬೀದರ್,ದಾವಣಗೆರೆ, ಧಾರವಾಡ ಕಲಬುರ್ಗಿ, ಹಾಸನ, ಹುಬ್ಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ಪೂರ್ವಭಾವಿ ಪರೀಕ್ಷೆ ಪರೀಕ್ಷಾ ಕೇಂದ್ರಗಳಿರುತ್ತವೆ. ಪ್ರತಿ ಪರೀಕ್ಷೆಯಲ್ಲೂ ಕನಿಷ್ಠ ಅಂಕಗಳಿಸಬೇಕು. ಅಂದರೆ ಒಟ್ಟಾರೆ ಹೆಚ್ಚು ಅಂಕಗಳಿಸುವುದು ಮುಖ್ಯ. ಸೆಕ್ಷನಲ್ ಕಟ್ ಆಫ್ ಅಂಕದ ಜೊತೆಯಲ್ಲಿ ಒವರಾಲ್ ಕಟ್ ಆಫ್‌ ಇಲ್ಲದೆ ಇರುವುದರಿಂದ ವಿದ್ಯಾರ್ಥಿಗಳಿಗೆ ಇದು ಅನುಕೂಲ.

ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆಯುತ್ತಾರೆ. ಎರಡು ಹಂತಗಳಲ್ಲಿ ಆನ್‌ಲೈನ್‌ ಮೂಲಕ ಮುಖ್ಯ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಹುಬ್ಬಳ್ಳಿ ಮತ್ತು ಮಂಗಳೂರಿನಲ್ಲಿ ಮಾತ್ರ ಪರೀಕ್ಷಾ ಕೇಂದ್ರಗಳಿರುತ್ತವೆ. ಮೂರು ಗಂಟೆ ಅವಧಿಯ ಈ ಮುಖ್ಯ ಪರೀಕ್ಷೆಯಲ್ಲಿ 200 ಅಂಕಗಳಿಗೆ 155 ಪ್ರಶ್ನೆಗಳನ್ನು ಕೇಳಲಾಗುತ್ತದೆ.ಯಾವ ವಿಷಯ, ಎಷ್ಟು ಅಂಕ, ಎಷ್ಟು ಸಮಯ– ಎಲ್ಲ ವಿವರಗಳು ಈ ಕೆಳಗಿನ ಕೋಷ್ಠಕದಲ್ಲಿದೆ.

ಎಲ್ಲ ಪ್ರಶ್ನೆಗಳು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಇರುತ್ತವೆ. ತಪ್ಪು ಉತ್ತರಕ್ಕೆ ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಗಳಲ್ಲಿ ಆಯಾ ವಿಷಯಕ್ಕೆ ಪ್ರತಿ ಪ್ರಶ್ನೆಗೆ ನಿಗದಿ ಪಡಿಸಿದ ಅಂಕದಿಂದ 0.25 ಅಂಕವನ್ನು ಕಳೆಯಲಾಗುತ್ತದೆ. ಪ್ರಶ್ನೆಗೆ ಉತ್ತರಿಸದಿದ್ದರೆ, ಯಾವುದೇ ರೀತಿಯ ದಂಡವಿರುವುದಿಲ್ಲ.

ಮುಖ್ಯ ಪರೀಕ್ಷೆ ಮುಗಿಯುತ್ತಿದ್ದಂತೆಯೇ 25 ಅಂಕಗಳಿಗೆ ಇಂಗ್ಲಿಷ್‌ ಭಾಷೆಗೆ ಸಂಬಂಧಿಸಿದಂತೆ ವಿವರಣಾತ್ಮಕ ಪರೀಕ್ಷೆ (ಡಿಸ್ಕ್ರಿಪ್ಟಿವ್‌ ಟೆಸ್ಟ್‌) ನಡೆಸಲಾಗುತ್ತದೆ. ಇದರಲ್ಲಿ ಪತ್ರ ಬರಹ ಮತ್ತು ಪ್ರಬಂಧ ರಚನೆಯ ಎರಡು ಪ್ರಶ್ನೆಗಳಿರುತ್ತವೆ. 30 ನಿಮಿಷಗಳಅವಧಿಯ ಈ ಪರೀಕ್ಷೆಯನ್ನು ಅಭ್ಯರ್ಥಿಗಳು ಕಂಪ್ಯೂಟರ್‌ನಲ್ಲಿಯೇ ಬರೆಯಬೇಕು.

ಈ ಬಾರಿಯ ಬಹು ಮುಖ್ಯ ಬದಲಾವಣೆ

ಇಂಗ್ಲಿಷ್ ಭಾಷೆಯ ವಿವರಣಾತ್ಮಕ ಪೇಪರ್ (ಪತ್ರ ಬರವಣಿಗೆ ಮತ್ತು ಪ್ರಬಂಧ) ಅನ್ನು ಸ್ವಯಂಚಾಲಿತ ಸ್ಕೋರಿಂಗ್ ಮೂಲಕ ಮೌಲ್ಯಮಾಪನ ಮಾಡಲಾಗುತ್ತದೆ. ಬರವಣಿಗೆಯ ಪ್ರಾವೀಣ್ಯಕ್ಕೆ ಸಂಬಂಧಿಸಿದಂತೆ ವೈಶಿಷ್ಟ್ಯಗಳನ್ನು ಗುರುತಿಸುವುದು ಇದರ ಕಾರ್ಯವಿಧಾನವಾಗಿದೆ. ಆಂಗ್ಲ ಭಾಷೆಯಲ್ಲಿ ಹಾಗೂ ಬರವಣಿಗೆಯಲ್ಲಿ ಪರೀಕ್ಷೆ ಬರೆಯುವವರ ಪ್ರಾವೀಣ್ಯವನ್ನು ವಸ್ತುನಿಷ್ಠ ರೀತಿಯಲ್ಲಿ ಮೌಲ್ಯಮಾಪನ ಮಾಡುವ ವಿಶಿಷ್ಟ ವಿಧಾನವಾಗಿದೆ. ಈ ಎರಡೂ ಪರೀಕ್ಷೆಗಳಲ್ಲಿ ಬ್ಯಾಂಕ್ ನಿಗದಿಪಡಿಸಿದಷ್ಟು ಅಂಕ ಪಡೆದವರು ಮಾತ್ರ ಮೂರನೇ ಹಂತಕ್ಕೆ ಅರ್ಹರಾಗುತ್ತಾರೆ.

ಅಭ್ಯರ್ಥಿಯು ಆನ್‌ಲೈನ್ ಮುಖ್ಯ ಪರೀಕ್ಷೆಯ ಪ್ರತಿ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಪಡೆದಿರಬೇಕು. ಸಂದರ್ಶನಕ್ಕೆ ಅರ್ಹತೆ ಪಡೆದಿರುವವರ ಪಟ್ಟಿ(ಶಾರ್ಟ್‌ಲಿಸ್ಟ್)ಯಲ್ಲಿ ಸ್ಥಾನ ಪಡೆಯಲು ಅಗತ್ಯವಾದ ಕನಿಷ್ಠ ಒಟ್ಟು ಅಂಕಗಳನ್ನು ಗಳಿಸಿರಬೇಕು. ಕನಿಷ್ಠ ಅಂಕಗಳು ಖಾಲಿ ಹುದ್ದೆಗಳ ಸಂಖ್ಯೆಯನ್ನು ಅವಲಂಬಿಸಿರುತ್ತವೆ. ಜೊತೆಗೆ, ಅವುಗಳ ಮೇಲೆ ಕಟ್-ಆಫ್‌ ಅಂಕಗಳನ್ನು ನಿರ್ಧರಿಸಲಾಗುವುದು ಮತ್ತು ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಸಂದರ್ಶನ ಪಟ್ಟಿಯಲ್ಲಿ ಸ್ಥಾನ ಪಡೆದ ಅಭ್ಯರ್ಥಿಗಳಿಗೆ ಸಂದರ್ಶನ ಪ್ರಕ್ರಿಯೆ ಪೂರ್ಣಗೊಳಿಸುವ ಮೊದಲು ಆನ್‌ಲೈನ್ ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಅಭ್ಯರ್ಥಿಗಳೊಂದಿಗೆ ಹಂಚಿಕೊಳ್ಳಲಾಗುವುದಿಲ್ಲ.

ಸಂದರ್ಶನದ ವೇಳೆ ‘ಒಬಿಸಿ’ ವರ್ಗದ ಅಡಿಯಲ್ಲಿ ಹಂತ -3 ಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳು ಒಬಿಸಿ ಪ್ರಮಾಣಪತ್ರವನ್ನು ‘ಕೆನೆ ಪದರ ರಹಿತ’(Non-Creamy layer) ಷರತ್ತು ಒಳಗೊಂಡಿರುವುದನ್ನು ಸಲ್ಲಿಸಬೇಕಾಗುತ್ತದೆ. ‘ಆರ್ಥಿಕವಾಗಿ ಹಿಂದುಳಿದ ವರ್ಗದ ಅಡಿಯಲ್ಲಿ’(ಇಡಬ್ಲ್ಯುಎಸ್‌) ಹಂತ-3 ಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳು ಆರ್ಥಿಕ ವರ್ಷದ ಒಟ್ಟು ವಾರ್ಷಿಕ ವರಮಾನದ ಆಧಾರದ ಮೇಲೆ ಇಡಬ್ಲ್ಯುಎಸ್‌ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.

ಆಯ್ಕೆ ಪಟ್ಟಿ

ಅಂತಿಮ ಸುತ್ತಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಂತ-II ಮತ್ತು ಹಂತ-III ಎರಡರಲ್ಲೂ ಪ್ರತ್ಯೇಕವಾಗಿ ಅರ್ಹತೆ ಪಡೆದಿರಬೇಕು. ಸಂದರ್ಶನಕ್ಕೆ ನಿಗದಿಪಡಿಸಲಾದ ಒಟ್ಟು ಅಂಕಗಳು 100. ಸಂದರ್ಶನದಲ್ಲಿ ಕನಿಷ್ಠ ಅರ್ಹತಾ ಅಂಕಗಳು ಶೇ 40 (ಎಸ್‌.ಸಿ/ಎಸ್‌.ಟಿ/ಒಬಿಸಿ/ಅಂಗವಿಕಲ ಅಭ್ಯರ್ಥಿಗಳಿಗೆ ಶೇ 35). ಆನ್‌ಲೈನ್ ಮುಖ್ಯ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳನ್ನು ಕ್ರಮವಾಗಿ 80:20 ಅನುಪಾತದ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ, ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸಲು ಹಾಗೂ ನೋಂದಣಿಗೆ ಬಳಸಬೇಕಾದ ಲಿಂಕ್: www.ibps.in

(ಲೇಖಕರು: ಬ್ಯಾಂಕಿಂಗ್ ತರಬೇತುದಾರರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಮತ್ತು ವೃತ್ತಿ ಮಾರ್ಗದರ್ಶಕರು.ಮಡಿಕೇರಿ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT