ಬಸವಕಲ್ಯಾಣ: ‘ಕೌಶಲವಿದ್ದವರಿಗೆ ಉದ್ಯೋಗದಲ್ಲಿ ಅಷ್ಟೇ ಅಲ್ಲ, ಎಲ್ಲ ಕ್ಷೇತ್ರಗಳಲ್ಲೂ ಮೊದಲ ಆದ್ಯತೆ ನೀಡಲಾಗುತ್ತದೆ’ ಎಂದು ಕಾಲೇಜಿನ ಉದ್ಯೋಗ ಕೋಶದ ಸಂಚಾಲಕ ನಾಗರಾಜ ನಿಂಬಾಳ್ಕರ್ ಹೇಳಿದ್ದಾರೆ.

ನಗರದ ಎಸ್.ಎಸ್.ಕೆ.ಬಸವೇಶ್ವರ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗಾಗಿ ಶನಿವಾರ ಆಯೋಜಿಸಿದ್ದ ಒಂದು ದಿನದ ಕೌಶಲಾಭಿವೃದ್ಧಿ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಇಂದಿನ ಸ್ವರ್ಧಾತ್ಮಕ ಯುಗದಲ್ಲಿ ಕೌಶಲ ಇಲ್ಲದಿದ್ದರೆ ಯಾವುದೇ ಕ್ಷೇತ್ರದಲ್ಲಿ ಅವಕಾಶಗಳು ಕಡಿಮೆ. ಆದ್ದರಿಂದ ಎಲ್ಲರೂ ಯಾವುದರಲ್ಲಾದರೂ ಕೌಶಲ ಬೆಳೆಸಿಕೊಳ್ಳಬೇಕು’ ಎಂದರು.

ಹುಬ್ಬಳ್ಳಿಯ ದೇಶಪಾಂಡೆ ಕೌಶಲ್ಯಾಭಿವೃದ್ಧಿ ಕೇಂದ್ರದ ವಿಭಾಗೀಯ ವ್ಯವಸ್ಥಾಪಕ ಉಮೇಶ ಪೂಜಾರಿ ಮಾತನಾಡಿ, ‘ದೇಶಪಾಂಡೆ ಕೌಶಲ್ಯಾಭಿವೃದ್ಧಿ ಕೇಂದ್ರದಿಂದ ಯುವಕರಿಗೆ ವಿವಿಧ ರೀತಿಯ ತರಬೇತಿ ನೀಡಲಾಗುತ್ತದೆ. ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ’ ಎಂದರು.

ಪ್ರಾಂಶುಪಾಲ ಶಿವಕುಮಾರ ಪಾಟೀಲ, ಸಂಪನ್ಮೂಲ ವ್ಯಕ್ತಿ ಅಜಿತ್ ಕುಲಕರ್ಣಿ, ದೀಪಿಕಾ, ಕೀರ್ತಿ ಮಾತನಾಡಿದರು. ಸಂಯೋಜಕ ವಿಜಯಕುಮಾರ, ಶಿಲ್ಪಾ ಬಿರಾದಾರ, ನಾಗಮ್ಮ, ಜ್ಯೋತಿ, ಸಾಕ್ಷಿ, ಕಲ್ಯಾಣಪ್ಪ ನಾವದಗಿ, ಶಶಿಧರ ಪಾಟೀಲ, ಮಹಾದೇವ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-33-824770941

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.