ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಕಂಪನಿ ಖಾಲಿ ಇರುವ 52 ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 20ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಇರಬೇಕಾದ ಅರ್ಹತೆಗಳೇನು? ಎಂಬುದನ್ನು ತಿಳಿಯೋಣ.

ಬಿಇಎಲ್ ಕಂಪನಿಯ ಅಧಿಸೂಚಿಯಂತೆ ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ ಹಾಗೂ ಯಾಂತ್ರಿಕ ವಿಭಾಗದಲ್ಲಿ ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳು ಆಸಕ್ತಿಯುಳ್ಳ ವಿಭಾಗಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಸಂಬಳ ಎಷ್ಟು? :

ಮೊದಲ ವರ್ಷ– ₹40,000

ಎರಡನೇ ವರ್ಷ – ₹45,000,

ಮೂರನೇ ವರ್ಷ –₹50,000

ನಾಲ್ಕನೇ ವರ್ಷ –₹55,000 ದೊರೆಯಲಿದೆ. ಇದರ ಜೊತೆಗೆ ಇತರೆ ಸೌಲಭ್ಯಗಳು ಸಿಗಲಿವೆ ಎಂದು ಕಂಪನಿ ತಿಳಿಸಿದೆ.

ವಿದ್ಯಾರ್ಹತೆ ಏನು?

ಬಿ.ಇ, ಬಿ.ಟೆಕ್, ಬಿ.ಎಸ್ಸಿ ಸೇರಿದಂತೆ ಇತರೆ ಸಂಬಂಧಿತ ವಿಷಯಗಳಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿರಬೇಕು.

ಅರ್ಹತೆಗಳು:

ಅರ್ಜಿ ಸಲ್ಲಿಸಲು ಅಭ್ಯರ್ಥಿ ಗರಿಷ್ಟ 32 ವರ್ಷದೊಳಗೆ ಇರಬೇಕು

ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಆಯ್ಕೆಯ ವಿಧಾನ:

ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳಿಗೆ ₹472 ಅರ್ಜಿ ಶುಲ್ಕವಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

https://bel-india.in/wp-content/uploads/2025/11/DETAIL-ADVERTISEMENT.pdf

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.