ಬೆಳಗಾವಿ: ‘ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು (ಜಿಟಿಟಿಸಿ) ವಿದ್ಯಾರ್ಥಿಗಳಿಗೆ ಜಾಗತಿಕ ಅಗತ್ಯಕ್ಕೆ ಅನುಗುಣವಾಗಿ ತರಬೇತಿ ನೀಡಿ ಉದ್ಯೋಗಾವಕಾಶಗಳನ್ನು ಒದಗಿಸುತ್ತದೆ. ಜಿಟಿಟಿಸಿ ಸಂಸ್ಥೆಯಲ್ಲಿ ಕೋರ್ಸುಗಳನ್ನು ಪೂರೈಸಿದ ಬಹಳಷ್ಟು ವಿದ್ಯಾರ್ಥಿಗಳು ಯಶಸ್ವಿ ಉದ್ಯಮಿಗಳು ಮತ್ತು ಪ್ರತಿಷ್ಠಿತ ಕೈಗಾರಿಕೆಗಳಲ್ಲಿ ಉನ್ನತ ಹುದ್ದೆಗಳನ್ನು ಪಡೆದಿದ್ದಾರೆ’ ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲ ಯಲ್ಲಪ್ಪ ಸವದತ್ತಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿ.ಟಿ.ಟಿ.ಸಿ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳನ್ನು ನಾಲ್ಕು ವರ್ಷದ ಕೈಗಾರಿಕಾ ತರಬೇತಿಯನ್ನು ಕಡ್ಡಾಯವಾಗಿ ಪಡೆಯಲು ವಿವಿಧ ಕೈಗಾರಿಕೆಗಳಿಗೆ ತರಬೇತಿ ಭತ್ಯೆಯೊಂದಿಗೆ ನಿಯೋಜಿಸಲಾಗುವುದು. ಹಲವು ಕಂಪನಿಗಳು ಸಂಸ್ಥೆಗೆ ಆಗಮಿಸಿ ಕ್ಯಾಂಪಸ್ ಸಂರ್ದಶನದ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುತ್ತವೆ’ ಎಂದರು.

‘ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಪ್ರವೇಶಾತಿಗಳು ಆರಂಭವಾಗಿದ್ದು ಮೇ 10 ಪ್ರವೇಶಾತಿಗೆ ಅಂತಿಮ ದಿನ. ಪ್ರತಿ ವರ್ಷ 150 ವಿದ್ಯಾರ್ಥಿಗಳಿಗೆ ಪೂರ್ಣಾವಧಿ ಹಾಗೂ 500 ವಿದ್ಯಾರ್ಥಿಗಳಿಗೆ ಅಲ್ಪಾವಧಿ ತರಬೇತಿ ನೀಡಲಾಗುವುದು. ಸಂಸ್ಥೆಯಿಂದ ಸುಮಾರು 1,011 ವಿದ್ಯಾರ್ಥಿಗಳು ಡಿಪ್ಲೊಮಾ ತರಬೇತಿ ಪೂರ್ಣಗೊಳಿಸಿ ಪ್ರತಿಷ್ಠಿತ ಕೈಗಾರಿಕೆಗಳಲ್ಲಿ ಉತ್ತಮ ವೇತನದೊಂದಿಗೆ ಕಾರ್ಯ ನಿರ್ವಹಿಸುತ್ತಿರುತ್ತಾರೆ’ ಎಂದರು.

‘ಸಂಸ್ಥೆಯಲ್ಲಿ ಲ್ಯಾಟರಲ್ ಪ್ರವೇಶಾತಿಗೆ ಅವಕಾಶವಿದ್ದು ಪಿ.ಯು ವಿಜ್ಞಾನ ಮುಗಿಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಎರಡನೇ ವರ್ಷದ ತರಬೇತಿಗೆ ಪ್ರವೇಶಾತಿ ಪಡೆಯಬಹುದಾಗಿದೆ. ಭವಿಷ್ಯದ ತಂತ್ರಜ್ಞಾನ ರೂವಾರಿಯಾಗಲಿಚ್ಛಿಸುವ ವಿದ್ಯಾರ್ಥಿಗಳು ಜಿಟಿಟಿಸಿ ಸಂಸ್ಥೆಯೊಂದಿಗೆ ಕೈಜೋಡಿಸಬೇಕು’ ಎಂದು ಯಲ್ಲಪ್ಪ ಮನವಿ ಮಾಡಿದರು.

ಸಂಸ್ಥೆಯ ಸಮನ್ವಯಾಧಿಕಾರಿ ಬಿ.ಜಿ. ಮೊಗೇದ ಮಾತನಾಡಿ, ‘ರಾಜ್ಯ ಸರ್ಕಾರ ಹಾಗೂ ಜರ್ಮನ್ ಸರ್ಕಾರದ ಒಡಂಬಡಿಕೆ ಮಾಡಿಕೊಳ್ಳಾಗಿದೆ. ಸಂಸ್ಥೆಯಿಂದ ತರಬೇತಿ ಪಡೆದಂತಹ 100ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಉತ್ತಮ ವೇತನದೊಂದಿಗೆ ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಮೂವತ್ತಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ತರಬೇತಿ ಪೂರ್ಣಗೊಳಿಸಿದ್ದು ಎಲ್ಲ ವಿದ್ಯಾರ್ಥಿಗಳಿಗೆ ವಿವಿಧ ಕೈಗಾರಿಕೆಗಳಿಂದ ಉದ್ಯೋಗದ ಖಾತ್ರಿ ದೊರಕಿದೆ’ ಎಂದು ತಿಳಿಸಿದರು.

ವಿಭಾಗದ ಮುಖ್ಯಸ್ಥ ರಾಮನಾಥ, ಆಡಳಿತಾಧಿಕಾರಿ ಬಸವರಾಜ ಪಾಟೀಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-21-325457400

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.