ಬೆಂಗಳೂರು: ಮನಮೋಹನ ಸಿಂಗ್ ಬೆಂಗಳೂರು ವಿಶ್ವವಿದ್ಯಾಲಯದ ತರಬೇತಿ ಮತ್ತು ನಿಯೋಜನೆ ಕೇಂದ್ರದ ವತಿಯಿಂದ ಮೇ 25ರಂದು ಬೆಳಿಗ್ಗೆ 10 ರಿಂದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.ವಿವಿಧ ಉದ್ಯಮ ವಲಯದ 150ಕ್ಕೂ ಹೆಚ್ಚು ಕಂಪನಿಗಳು ಈ ಮೇಳದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು ನೇರ ಸಂದರ್ಶನದ ಮೂಲಕ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗುತ್ತದೆ. ಬೆಂಗಳೂರು ನಗರ ವಿಶ್ವವಿದ್ಯಾಲಯ ಮಾತ್ರವಲ್ಲದೆ ಆಸಕ್ತ ಪದವೀಧರರು, ಸ್ನಾತಕೋತ್ತರ ಪದವೀಧರರು ಹಾಗೂ ವಿವಿಧ ಕೋರ್ಸ್ ಗಳ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೂ ಪಾಲ್ಗೊಳ್ಳಬಹುದುಮಾಹಿತಿಗೆ ಮೊಬೈಲ್ ಸಂಖ್ಯೆ 8197060311 ಅಥವಾ 9035992785 ಸಂಪರ್ಕಿಸಲು ಕೋರಲಾಗಿದೆ. ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ ನೂತನ ಶೈಕ್ಷಣಿಕ ವಿಭಾಗದ ಕಟ್ಟಡದಲ್ಲಿ ಏರ್ಪಡಿಸಲಾಗಿರುವ ಉದ್ಯೋಗ ಮಹಾಮೇಳವನ್ನು ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಎಸ್.ಆರ್. ನಿರಂಜನ ಉದ್ಘಾಟಿಸುವರು. ಕುಲಪತಿ ರಮೇಶ್ ಬಿ., ಕುಲಸಚಿವ ಎ. ನವೀನ್ ಜೋಸೆಫ್, ಕುಲಸಚಿವ (ಮೌಲ್ಯಮಾಪನ) ರಮೇಶ. ಬಿ. ಕುಡೇನಟ್ಟಿ ಮತ್ತು ವಿತ್ತಾಧಿಕಾರಿ ಎಂ.ವಿ.ವಿಜಯಲಕ್ಷ್ಮಿ ಭಾಗವಹಿಸುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-4-962604490

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.