ಬೆಂಗಳೂರು: ‘ರಾಜ್ಯದ ಯುವಕರಿಗೆ ನೆರವಾಗುವ ಉದ್ದೇಶದಿಂದ ಮಲ್ಲೇಶ್ವರ ದಲ್ಲಿ ಉದ್ಯೋಗ ಮೇಳವನ್ನು ಆಯೋಜಿ ಸಲಾಗಿತ್ತು’ ಎಂದು ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಡಾ.ಸಿ.ಎನ್. ಅಶ್ವತ್ಥನಾರಾಯಣ ಫೌಂಡೇಷನ್ ಸೋಮವಾರ ಹಮ್ಮಿ ಕೊಂಡಿದ್ದ ಯುವೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಪಡೆಯಲು ಹಾಗೂ ಅವರಿಗೆ ನೆರವಾಗಲು ಉದ್ಯೋಗ ಮೇಳಗಳು ಸಹಕಾರಿಯಾಗಿವೆ. ಇಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗದ ಬಗ್ಗೆ ಮಾರ್ಗದರ್ಶನ ನೀಡಲಾಗಿದೆ. ನಮ್ಮ ಈ ಕಾರ್ಯಕ್ರಮಕ್ಕೆ ಹಲವಾರು ಸಂಘ–ಸಂಸ್ಥೆಗಳು ಕೈ ಜೋಡಿಸಿವೆ’ ಎಂದರು.

‘ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ದೊರೆತರೆ ಸದೃಢ ಸಮಾಜ ನಿರ್ಮಿಸಬಹುದು. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಉದ್ಯೋಗ ಅವಕಾಶ ಸೃಷ್ಟಿಸಲು ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಲಕ್ಷಾಂತರ ಉದ್ಯೋಗಾವ ಕಾಶಗಳು ಸೃಷ್ಟಿ ಆಗಿವೆ. ಬಸವೇಶ್ವರರ ಜಯಂತಿಯ ದಿನವೇ ಈ ಮೇಳ ಆಯೋಜಿಸಲಾಗಿದೆ. ಬಸವಣ್ಣನವರ ಕಾಯಕವೇ ಕೈಲಾಸ ಎಂಬ ಮಾತಿನಂತೆ ಸಮಾನತೆಯ ಸಮಾಜ ಕಟ್ಟಲು ಎಲ್ಲರೂ ಬದ್ಧರಾಗೋಣ’ ಎಂದು ಅವರು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-4-913181910

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.