ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BHEL: 575 ಎಂಜಿನಿಯರಿಂಗ್‌ ಹುದ್ದೆಗಳು; ಅರ್ಜಿ ಸಲ್ಲಿಕೆಗೆ ಸೆ.07 ಕಡೆ ದಿನ

Last Updated 30 ಆಗಸ್ಟ್ 2022, 9:02 IST
ಅಕ್ಷರ ಗಾತ್ರ

ಭಾರತ್‌ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ (ಬಿಎಚ್‌ಇಎಲ್‌) 2022ನೇ ಸಾಲಿನ ನೇಮಕಾತಿ ಕುರಿತಂತೆ ವೆಬ್‌ಸೈಟ್‌ನಲ್ಲಿ ಅಧಿಕೃತ ಮಾಹಿತಿ ಹೊರಡಿಸಿದೆ.

ಐಟಿಐ, ಡಿಪ್ಲೊಮಾ, ಎಂಜಿನಿಯರಿಂಗ್ ಪದವಿ ಪಾಸ್ ಮಾಡಿದ ಅಭ್ಯರ್ಥಿಗಳು ಗ್ರ್ಯಾಜುಯೇಟ್‌, ಟೆಕ್ನಿಕಲ್‌ ಹಾಗೂ ಟ್ರೇಡ್‌ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ.

ಹುದ್ದೆಗಳು: ಎಂಜಿನಿಯರ್‌ ಅಪ್ರೆಂಟಿಸ್ ಹುದ್ದೆಗಳು

ಹುದ್ದೆಗಳ ಸಂಖ್ಯೆ: 575

ವಿದ್ಯಾರ್ಹತೆ: ಐಟಿಐ ಅಥವಾ ಡಿಪ್ಲೊಮಾ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್‌ ಪದವಿ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ನೋಡುವುದು.

ಭತ್ಯೆ: ₹21 ಸಾವಿರ ತರಬೇತಿ ಭತ್ಯೆ ನೀಡಲಾಗುವುದು.

ವಯೋಮಿತಿ: ಗರಿಷ್ಠ 27 ವರ್ಷ ಮೀರಿರಬಾರದು . ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಿನಾಯಿತಿ ಇದೆ.

ಆಯ್ಕೆ ಪ್ರಕ್ರಿಯೆ: ಡಿಪ್ಲೊಮಾ ಅಥವಾ ಪದವಿಯಲ್ಲಿ ಪಡೆದ ಗರಿಷ್ಠ ಅಂಕಗಳ ಸರಾಸರಿ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ನಡೆಯುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:07-09-2022

ಹೆಚ್ಚಿನ ಮಾಹಿತಿಗೆ...www.mhrdnats.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT