ಬೀದರ್: ನಗರದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ‘ಬೃಹತ್ ಉದ್ಯೋಗ ಮೇಳ–2026 ದಲ್ಲಿ 45ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು 327 ಅಭ್ಯರ್ಥಿಗಳಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿದವು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ಎಸ್.ದೇಶಮುಖ ಮಾತನಾಡಿ, ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪದವಿಯ ಜೊತೆಗೆ ಕೌಶಲವೂ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಇಂತಹ ಉದ್ಯೋಗ ಮೇಳಗಳ ಮೂಲಕ ಕೈಗಾರಿಕೆಗಳ ಅವಶ್ಯಕತೆಗಳನ್ನು ಅರಿತು ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ವಿಡಿಯೊ ಸಂದೇಶದ ಮೂಲಕ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ನೀತಾ ಶೈಲೇಂದ್ರ ಬೆಲ್ದಾಳೆ ಮಾತನಾಡಿ, ‘ಇಂದಿನ ಯುವಜನತೆ ತಾಂತ್ರಿಕ ಜ್ಞಾನ, ಸಂವಹನ ಕೌಶಲ ಮತ್ತು ವೃತ್ತಿಪರ ಸಾಮರ್ಥ್ಯಗಳನ್ನು ವೃದ್ಧಿಸಿಕೊಳ್ಳುವ ಮೂಲಕ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಸಿದ್ಧರಾಗಬೇಕು’ ಎಂದರು.

ಮುಖ್ಯ ಅತಿಥಿಗಳಾದ ಸೋಮಶೇಖರ ಬಿರಾದಾರ ಹಾಗೂ ಶ್ರೀಕಾಂತ್, ಸತೀಶ್ ಪ್ರತಾಪುರ ಮಾತನಾಡಿದರು.

ಉದ್ಯೋಗ ಮೇಳದಲ್ಲಿ ಮಾಹಿತಿ ತಂತ್ರಜ್ಞಾನ, ಕೋರ್ ಎಂಜಿನಿಯರಿಂಗ್, ಬಿಪಿಒ, ಬ್ಯಾಂಕಿಂಗ್, ವಿಮಾ, ಉತ್ಪಾದನಾ ಹಾಗೂ ಎಲೆಕ್ಟ್ರಾನಿಕ್ಸ್ ಕ್ಷೇತ್ರಗಳ ಪ್ರಮುಖ ಕಂಪನಿಗಳಾದ ಇನ್ಫೋಸಿಸ್, ಟೆಕ್ ಮಹೀಂದ್ರಾ, ಎಂಫಾಸಿಸ್, ಕಾಂಸೆಂಟ್ರಿಕ್ಸ್, ಎಥರ್ ಎನರ್ಜಿ, ಬಜಾಜ್ ಅಲಿಯಾನ್ಸ್, ಎನ್ಐಐಟಿ, ಪಾರ್ಕ್ ಕಂಟ್ರೋಲ್ಸ್, ಕ್ಯಾಡ್ಮ್ಯಾಕ್ಸ್ ಸೊಲ್ಯೂಷನ್ಸ್, ಎಜುಟೆಕ್, ಎನ್ಟಿಟಿಎಫ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಸ್ಕೆಲೋ, ವಿಜಯ್ ಎಲೆಕ್ಟ್ರಿಕ್ ಸೇರಿದಂತೆ ದೇಶದ ಹಲವು ಪ್ರತಿಷ್ಠಿತ ಸಂಸ್ಥೆಗಳು ಭಾಗವಹಿಸಿದ್ದವು.

1,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂದರ್ಶನ ಎದುರಿಸಿದರು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ದಾಕ್ಷಾಯಣಿ ಎಸ್.ಅಪ್ಪ ಹಾಗೂ ಶರಣಬಸವೇಶ್ವರ ಸಂಸ್ಥಾನದ 9ನೇ ಮಹಾದಾಸೋಹ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಶುಭ ಹಾರೈಸಿದ್ದಾರೆ.

ಕಾಲೇಜಿನ ಪ್ರಾಚಾರ್ಯೆ ವಿನಿತಾ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಸಂಯೋಜಕ ವಿವೇಕಾನಂದ ಬಿರಾದಾರ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದರು. ಪ್ರಾಧ್ಯಾಪಕಿ ಸಹನಾ ಪಾಟೀಲ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-33-799064495

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.