ಬುಧವಾರ, ಮೇ 25, 2022
29 °C

BSF | Diploma ವಿದ್ಯಾರ್ಹತೆ: ಕಾನ್‌ಸ್ಟೆಬಲ್‌ ಹುದ್ದೆಗಳಿಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತೀಯ ಗಡಿ ಭದ್ರತಾ ಪಡೆಯಲ್ಲಿ (ಬಿಎಸ್‌ಎಫ್‌) ಖಾಲಿ ಇರುವ ಕಾನ್‌ಸ್ಟೆಬಲ್‌ ಗ್ರೇಡ್‌ (ಮೆಕಾನಿಕ್‌ ಹಾಗೂ ಸ್ಟೋರ್‌ ಮ್ಯಾನ್‌) ಹುದ್ದೆಗಳ ನೇಮಕಾತಿಗೆ ಭಾರತೀಯ ಪ್ರಜೆಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. 

ಒಟ್ಟು ಹುದ್ದೆಗಳ ಸಂಖ್ಯೆ: 65

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಹಾಗೂ ಅಂಗೀಕೃತ ಶಿಕ್ಷಣ ಸಂಸ್ಥೆಯಿಂದ ಹುದ್ದೆಗ ಸಂಬಂಧಿಸಿದಂತೆ ಡಿಪ್ಲೋಮಾ ಪಡೆದಿರಬೇಕು. ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ ಹಾಗೂ ವೇತನ ಶ್ರೇಣಿ ಸೇರಿದಂತೆ ಇತರೆ ಮಾಹಿತಿಯನ್ನು ಬಿಎಸ್‌ಎಫ್‌ ವೆಬ್‌ಸೈಟ್‌ ಮೂಲಕ ಪಡೆಯಬಹುದು.

ವಯಸ್ಸು: ಕನಿಷ್ಠ 18, ಗರಿಷ್ಠ 28 (ಹುದ್ದೆಗಳಿಗೆ ಅನುಸಾರವಾಗಿ ವಯಸ್ಸನ್ನು ನಿಗದಿಪಡಿಸಲಾಗಿದೆ. ಮಾಹಿತಿಗೆ ಅಧಿಸೂಚನೆ ನೋಡುವುದು.)

ನೇಮಕಾತಿ ವಿಧಾನ: ನೇಮಕಾತಿಯು ಲಿಖಿತ ಹಾಗೂ ದೈಹಿಕ ಪರೀಕ್ಷೆ ಮೂಲಕ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. 

ಅರ್ಜಿ ಸಲ್ಲಿಸುವ ಕಡೆ ದಿನಾಂಕ:  26–07–2021

ವೆಬ್‌ಸೈಟ್‌: http://bsf.nic.in

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು