ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Central Bank of India: ಎಸ್‌ಒ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

Last Updated 19 ಡಿಸೆಂಬರ್ 2021, 6:17 IST
ಅಕ್ಷರ ಗಾತ್ರ

ದೇಶದಾದ್ಯಂತ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದ ವಿವಿಧ ಪ್ರಾದೇಶಿಕ ಮತ್ತು ಶಾಖಾ ಕಚೇರಿಗಳಲ್ಲಿ ಖಾಲಿ ಇರುವ ವಿಶೇಷ ಅಧಿಕಾರಿ (ಎಸ್‌ಒ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ದಿನಾಂಕವನ್ನು ಡಿಸೆಂಬರ್‌ 30ಕ್ಕೆ ವಿಸ್ತರಣೆ ಮಾಡಿದೆ.

ಮಾಹಿತಿ ಇಲ್ಲಿದೆ.

ಹುದ್ದೆಯ ಹೆಸರು: ವಿಶೇಷ ಅಧಿಕಾರಿ

ಹುದ್ದೆಗಳ ಸಂಖ್ಯೆ: 115

ವಿದ್ಯಾರ್ಹತೆ: ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು.

ವೇತನ ಶ್ರೇಣಿ: ಇತರೆ ಭತ್ಯೆಗಳು ಸೇರಿದಂತೆ ಮಾಸಿಕ ₹ 36,700 ಮೂಲ ವೇತನ ಪಡೆಯಬಹುದು.

ವಯಸ್ಸು: ಕನಿಷ್ಠ 18 ವರ್ಷಗಳು, ಗರಿಷ್ಠ 30 ವರ್ಷಗಳ ವಯೋಮಿತಿಯಲ್ಲಿ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಆದಾಗ್ಯೂ ಸರ್ಕಾರಿ ನಿಯಮಾವಳಿಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ₹ 175. ಇತರೆ ಅಭ್ಯರ್ಥಿಗಳಿಗೆ ₹ 850 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಗಾಗಿ ಅಧಿಸೂಚನೆಯನ್ನು ನೋಡುವುದು.

ಅರ್ಜಿಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌ https://www.centralbankofindia.co.in/en ಗೆ ಲಾಗಿನ್‌ ಆಗಿ ಅರ್ಜಿಗಳನ್ನು ಸಲ್ಲಿಸಬಹುದು.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು 2021ರ ಡಿಸೆಂಬರ್‌ 30ಕೊನೆ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಎಸ್‌ಬಿಐ ಹೊರಡಿಸಿರುವ ನೇಮಕಾತಿ ಅಧಿಸೂಚನೆಯನ್ನು ನೋಡಬಹುದು. ಈ ಕೆಳಗೆ ಅಧಿಸೂಚನೆ ಲಿಂಕ್‌ ನೀಡಲಾಗಿದೆ.

ವೆಬ್‌ಸೈಟ್‌: https://www.centralbankofindia.co.in/en

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT