ಚಾಮರಾಜನಗರ: ಜಿಲ್ಲೆಯ ಇಟ್ಟಿಗೆ ಕಾರ್ಖಾನೆ, ಅಂಗಡಿ ಮಳಿಗೆಗಳು, ವಾಣಿಜ್ಯ ಉದ್ಯಮ, ಗ್ಯಾರೇಜ್, ಎಸ್ಟೇಟ್ ಸೇರಿದಂತೆ ಹಲವೆಡೆ ಅನಿರೀಕ್ಷಿತ ಭೇಟಿನೀಡಿ ಬಾಲ ಕಾರ್ಮಿಕರನ್ನು ಪತ್ತೆಹಚ್ಚಿ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆ ಸಂಬಂಧ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯಲ್ಲಿ ಮಾತನಾಡಿ, ಬಾಲಕಾರ್ಮಿಕ ಪದ್ದತಿಯು ಮಕ್ಕಳನ್ನು ದೈಹಿಕ, ಮಾನಸಿಕವಾಗಿ ಹಿಂಸಿಸುತ್ತದೆ. ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಶಿಕ್ಷಣ ಮೊಟುಕುಗೊಳಿಸುವುದರ ಜೊತೆಗೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಅಡ್ಡಿಪಡಿಸುತ್ತದೆ ಎಂದರು.

ದುಡಿಮೆಯಲ್ಲಿ ತೊಡಗಿಸಿಕೊಂಡಿರುವ ಹಾಗೂ ಶಿಕ್ಷಣ ವಂಚಿತ ಮಕ್ಕಳನ್ನು ಗುರುತಿಸಿ ಸಮಾಜದ ಮುಖ್ಯವಾಹಿನಿಗೆ ಕರೆತರುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹವಾಗಿದ್ದು ಮಾಲೀಕರು ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವಂತಿಲ್ಲ. ಜಿಲ್ಲೆಯಲ್ಲಿರುವ ಉದ್ಯಮಗಳು ಹಾಗೂ ವಾಣಿಜ್ಯ ಕೇಂದ್ರಗಳಲ್ಲಿ ಬಾಲ ಕಾರ್ಮಿಕರು ಕೆಲಸ ಮಾಡುತ್ತಿದ್ದರೆ ಕಾರ್ಮಿಕ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.

ವಿಶೇಷವಾಗಿ ಕೈಗಾರಿಕಾ ಪ್ರದೇಶ, ಕಾಡಂಚಿನ ಭಾಗಗಳಲ್ಲಿರುವ ಎಸ್ಟೇಟ್ ಹಾಗೂ ಇನ್ನಿತರ ಕಡೆಗಳಿಗೆ ನಿರಂತರವಾಗಿ ಭೇಟಿನೀಡಿ ಬಾಲಕಾರ್ಮಿಕರನ್ನು ದುಡಿಸಿಕೊಳ್ಳಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ಅಪಾಯಕಾರಿ ಉದ್ಯಮಗಳಲ್ಲಿ ಕಿಶೋರ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿದ್ದರೆ ಕಾನೂನು ಕ್ರಮ ಜರುಗಿಸಬೇಕು ಎಂದು ನಿರ್ದೇಶನ ನೀಡಿದರು.

ಬಾಲಕಾರ್ಮಿಕರನ್ನು ದುಡಿಸಿಕೊಳುತ್ತಿರುವುದು ಕಂಡುಬಂದಲ್ಲಿ ಇಲಾಖೆಗಳ ಅಧಿಕಾರಿಗಳು ಕೂಡ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಬೇಕು. ಶಾಲೆ ತೊರೆದ ಮಕ್ಕಳ ಬಗ್ಗೆ ನಿಗಾ ವಹಿಸಬೇಕು. 5 ಹಾಗೂ 7ನೇ ತರಗತಿ ಪೂರೈಸಿದ ಬಳಿಕ ಮಕ್ಕಳು ಶಾಲೆಗೆ ದಾಖಲಾಗುತ್ತಿದ್ದಾರೆಯೇ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು ಎಂದರು.

ಶಾಲೆಗೆ ದಾಖಲಾಗದಿದ್ದರೆ ಅಥವಾ ನಿರಂತರವಾಗಿ ಗೈರು ಹಾಜರಾಗುತ್ತಿರುವುದು ಕಂಡುಬಂದಲ್ಲಿ ಮಕ್ಕಳ ಮನೆಗಳಿಗೆ ತೆರಳಿ ಪೋಷಕರ ಮನವೊಲಿಸಿ ಮಕ್ಕಳನ್ನು ಮರು ಶಾಲೆಗೆ ದಾಖಲು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಸೂಚಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಮಾತನಾಡಿ, ‘ಅಪಾಯಕಾರಿಯಲ್ಲದ ಉದ್ಯಮಗಳಲ್ಲಿ ಕಿಶೋರರನ್ನು ನೇಮಿಸಿಕೊಂಡರೂ ಪಾಲಿಸಬೇಕಾದ ಷರತ್ತು ಹಾಗೂ ನಿಬಂಧನೆಗಳನ್ನು ಕೆಲಸದ ಸ್ಥಳಗಳಲ್ಲಿ ಎದ್ದು ಕಾಣುವಂತೆ ಪ್ರದರ್ಶಿಸಬೇಕು. ವಿಶ್ರಾಂತಿ ಹಾಗೂ ಕೆಲಸದ ಅವಧಿಯನ್ನು ನಿಯಮಾನುಸಾರ ಗೊತ್ತು ಮಾಡಬೇಕು. ನಿಯಮಗಳು ಉಲ್ಲಂಘನೆಯಾದರೆ ದೂರು ದಾಖಲಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜ್ ಮಾತನಾಡಿ ಬಾಲಕಾರ್ಮಿಕ ಪದ್ದತಿ ನಿಷೇಧಕ್ಕೆ ಪೊಲೀಸ್ ಇಲಾಖೆ ಅಗತ್ಯ ನೆರವು ನೀಡಲಿದೆ. ಬಾಲಕಾರ್ಮಿಕರು ದುಡಿಯುತ್ತಿರುವ ಬಗ್ಗೆ ಮಾಹಿತಿ ನೀಡಿದರೆ ಕಾನೂನು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಬಾಲಕಾರ್ಮಿಕ ಪದ್ದತಿ, ಬಾಲ್ಯವಿವಾಹ ನಿಷೇಧ ಕುರಿತ ಮಾಹಿತಿ ನೀಡುವ ಪೋಸ್ಟರ್ ಗಳನ್ನು ಬಿಡುಗಡೆ ಮಾಡಲಾಯಿತು.

ಜಿಲ್ಲಾ ಕಾರ್ಮಿಕ ಅಧಿಕಾರಿ ಟಿ.ಸಿ.ರಾಮಚಂದ್ರಯ್ಯ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ನಿರ್ದೇಶಕರಾದ ಎಂ. ಮಹೇಶ್, ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಅರುಣ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಸುರೇಶ್, ಮಕ್ಕಳ ರಕ್ಷಣಾಧಿಕಾರಿ ಮಂಜುಳಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಶ್ವನಾಥ್ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-37-150119119

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.