ಚಿಕ್ಕಬಳ್ಳಾಪುರ: ಈಗ ಮೊಬೈಲ್ ಹಾಗೂ ಇತರ ವಿಲಾಸಿ ವಸ್ತುಗಳನ್ನು ಹೊಂದಲು ಹೆಚ್ಚು ಪ್ರಾಮುಖ್ಯ ನೀಡಲಾಗುತ್ತಿದೆ. ತಮಗೆ ಸಿಗುವ ಸಂಬಳವನ್ನು ದುಂದು ವೆಚ್ಚ ಮಾಡದೆ ಅಗತ್ಯಕ್ಕೆ ತಕ್ಕಂತೆ ಬಳಕೆ ಮಾಡಿ ಸುಸಜ್ಜಿತ ಜೀವನ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಟಿ.ಪಿ ರಾಮಲಿಂಗೇಗೌಡ ಅವರು ಕಾರ್ಮಿಕರಿಗೆ ತಿಳಿಸಿದರು.

ನಗರ ಹೊರವಲಯದ ಕೈಗಾರಿಕಾ ಪ್ರದೇಶದ ಟೈಟಾನ್ ಕಂಪನಿಯಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಕಾರ್ಮಿಕ ಇಲಾಖೆ ಹಾಗೂ ಟೈಟಾನ್ ಕಂಪನಿ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾರ್ಮಿಕ ದಿನದ ಮಹತ್ವದ ಕುರಿತು 1889ರಲ್ಲಿ ಪ್ಯಾರಿಸ್ನಲ್ಲಿ ನಡೆದ ವಿಶ್ವ ಕಾರ್ಮಿಕ ನಾಯಕರ ಸಭೆಯಲ್ಲಿ ತೀರ್ಮಾನದಂತೆ ಮೇ 1 ಅನ್ನು ಕಾರ್ಮಿಕರ ದಿನಾಚರಣೆ ಎಂದು ವಿಶ್ವ ಸಂಸ್ಥೆ ಘೋಷಿಸಿತು ಎಂದರು.

ಕಾರ್ಮಿಕರು ತಮಗೆ ಸಿಗಬೇಕಾದ ಮೂಲ ಸೌಕರ್ಯ ಹಾಗೂ ಕಾನೂನು ಬದ್ಧ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಕಾರ್ಮಿಕರು ನಿರ್ವಹಿಸಬೇಕಾದ ಕರ್ತವ್ಯಗಳು ಹಾಗೂ ಸುರಕ್ಷಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕಾರ್ಮಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಉದ್ಯೋಗವಿತ್ತ ಸಂಸ್ಥೆಗಳು ಗಮನ ನೀಡಬೇಕು ಎಂದು ಹೇಳಿದರು.

ವಕೀಲರ ಸಂಘದ ಅಧ್ಯಕ್ಷ ಕೆ.ವಿ. ಅಭಿಲಾಷ್ ಮಾತನಾಡಿ, ಇಂದಿನ ಕಾರ್ಮಿಕ ಮುಂದೆ ಮಾಲೀಕನಾಗುವ ಕನಸು ಕಾಣಬೇಕು. ಕಾರ್ಮಿಕರ ಏಳಿಗೆಯಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪಾ, ಟೈಟಾನ್ ಕಂಪನಿ ಉಪಾಧ್ಯಕ್ಷ ಸುಬ್ರತ್ ಕುಮಾರ್ ಭಾತ್ರಾ, ಕಾರ್ಮಿಕ ನಿರೀಕ್ಷಕಿ ಜೆ.ವಿ. ಕಲಾವಾಣಿ ಮತ್ತು ವಕೀಲರು, ಟೈಟಾನಿಕ್ ಕಂಪನಿಯ ಸಿಬ್ಬಂದಿ ಹಾಗೂ ಕಾರ್ಮಿಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-16-938473171

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.