ಚಿಕ್ಕಮಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜು ಹಾಗೂ ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ತಾತ್ಕಾಲಿಕವಾಗಿ ಖಾಲಿಯಿರುವ ಹುದ್ದೆಗಳಿಗೆ ವಿಷಯವಾರು ಅತಿಥಿ ಶಿಕ್ಷಕ-ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ನಗರದ ಎಂ.ಜಿ.ರಸ್ತೆಯ ಬಿಟಿಎಂಇ ಜಾಮೀಯಾ ಕಾಂಪ್ಲೆಕ್ಸ್ನಲ್ಲಿರುವ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಪಿಸಿಎಂಬಿ, ಸಿಇಬಿಎ, ಎಚ್ಇಬಿಎ ಕನ್ನಡ ಮತ್ತು ಆಂಗ್ಲ ಭಾಷೆ ಒಳಗೊಂಡಂತೆ ವಿಜ್ಞಾನ, ವಾಣಿಜ್ಯ ಮತ್ತು ಕಲಾವಿಭಾಗಕ್ಕೆ ಅತಿಥಿ ಉಪನ್ಯಾಸಕರ (ಆಂಗ್ಲ ಮಾಧ್ಯಮ) ಒಟ್ಟು 12 ಹುದ್ದೆಗಳಿವೆ. ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಮತ್ತು ಬಿ.ಇಡಿ ಆಗಿರಬೇಕು.

ಕಡೂರಿನ ಮೌಲಾನ ಆಜಾದ್ ಶಾಲೆಯಲ್ಲಿ ಕನ್ನಡ, ಇಂಗ್ಗಿಷ್, ಉರ್ದು ಭಾಷೆ ಮತ್ತು ಗಣಿತ, ಸಾಮಾನ್ಯ ವಿಜ್ಞಾನ, ಸಮಾಜ ವಿಜ್ಞಾನ ವಿಭಾಗಕ್ಕೆ ಅತಿಥಿ ಶಿಕ್ಷಕರ (ಆಂಗ್ಲ ಮಾಧ್ಯಮ) ಒಟ್ಟು 6 ಹುದ್ದೆಗಳಿವೆ. ಅಭ್ಯರ್ಥಿಗಳು ಪದವಿ ಮತ್ತು ಬಿ.ಇಡಿ ಆಗಿರಬೇಕು. ಅರ್ಜಿ ಸಲ್ಲಿಸಲು ಮೇ 26 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ನಗರದ ಜ್ಯೋತಿನಗರದಲ್ಲಿರುವ ಜಿಲ್ಲಾ ಪಂಚಾಯಿತಿಯ ವಾಣಿಜ್ಯ ತೆರಿಗೆ ಇಲಾಖೆ ಕಟ್ಟಡ ಹಿಂಭಾಗದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿಯ (ದೂ: 08262-295848, 9483391312, 9343980040, 8310683171, 9844866263) ನ್ನು ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-126-275642407

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.