ಚಿಕ್ಕಮಗಳೂರು: ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪದವಿ ಪಡೆದರೆ ಸಾಲದು. ಯುವ ಸಮೂಹ ತಾಂತ್ರಿಕ ಕೌಶಲ ಪಡೆಯಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಐಡಿಎಸ್ಜಿ ಕಾಲೇಜು ಸಹಭಾಗಿತ್ವದಲ್ಲಿ ಸೋಮವಾರ ನಗರದ ಐಡಿಎಸ್ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ ಐದು ತಿಂಗಳ ಅವಧಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದೆ. ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳು ಸಮಾಜದ ಪ್ರತಿಯೊಬ್ಬರಿಗೂ ತಲುಪುತ್ತಿವೆ ಎಂದು ತಿಳಿಸಿದರು.

ಬದಲಾಗುತ್ತಿರುವ ಜಗತ್ತಿನಲ್ಲಿ ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನದ ಅಬ್ಬರ ಹೆಚ್ಚಾಗಿದೆ. ಇದರಿಂದ ಮಾನವ ಶಕ್ತಿಯ ಬಳಕೆ ಕಡಿಮೆಯಾಗುತ್ತಿದೆ. ಇಂತಹ ಸವಾಲಿನ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಪದವಿಗಳಿಗೆ ಸೀಮಿತವಾಗದೆ ಮಾರುಕಟ್ಟೆಯ ಅಗತ್ಯಕ್ಕೆ ತಕ್ಕಂತೆ ಹೊಸ ಕೌಶಲ ಬೆಳೆಸಿಕೊಳ್ಳಬೇಕು. ಉದ್ಯೋಗ ಮೇಳಗಳ ರೀತಿಯ ಅವಕಾಶಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಸಲಹೆ ನೀಡಿದರು.

ರಾಜ್ಯ ಪರಿಸರ ಮೌಲ್ಯ ಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್.ಮಹೇಶ್ ಮಾತನಾಡಿ, ಶಿಕ್ಷಣದ ನಂತರ ಬದುಕನ್ನು ರೂಪಿಸಿಕೊಳ್ಳುವ ಕನಸು ಹೊತ್ತ ಯುವಜನರಿಗೆ ಈ ಉದ್ಯೋಗ ಮೇಳವು ಭರವಸೆಯ ವೇದಿಕೆ ಎಂದರು.

ಜಿಲ್ಲೆಯು ಮಲೆನಾಡು ಮತ್ತು ಬಯಲು ಸೀಮೆಯನ್ನು ಹೊಂದಿದ್ದು, ಇಲ್ಲಿ ವಿದ್ಯಾರ್ಜನೆಗೆ ವಿಫುಲ ಅವಕಾಶಗಳಿವೆ. ಆದರೆ, ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಕೈಗಾರಿಕೆಗಳು ಅಥವಾ ಸಾಫ್ಟ್ವೇರ್ ಕಂಪನಿಗಳಿಲ್ಲದ ಕಾರಣ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿ ಉದ್ಯೋಗಾವಕಾಶ ಬಹಳಷ್ಟು ಕಡಿಮೆ ಇವೆ. ಇದನ್ನು ಮನಗಂಡ ರಾಜ್ಯ ಸರ್ಕಾರ, ಕೈಗಾರಿಕೆ ಮತ್ತು ಕಂಪನಿಗಳನ್ನು ಆಹ್ವಾನಿಸಿ ಉದ್ಯೋಗಾಕಾಂಕ್ಷಿಗಳಿಗೆ ವೇದಿಕೆ ಕಲ್ಪಿಸಿಕೊಟ್ಟಿರುವುದು ಶ್ಲಾಘನೀಯ ಎಂದು ಹೇಳಿದರು.

ಕಳೆದ ವರ್ಷ ನಡೆದ ಮೇಳದಲ್ಲಿ ಸುಮಾರು 1,500 ಅಭ್ಯರ್ಥಿಗಳು ಪಾಲ್ಗೊಂಡಿದ್ದು, ಆ ಪೈಕಿ 500 ಜನರಿಗೆ ಉದ್ಯೋಗ ದೊರೆತಿತ್ತು. ಈ ಬಾರಿ 5 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಮಾತನಾಡಿ, ‘ಉದ್ಯೋಗ ಮೇಳದ ಮೂಲಕ ಅಭ್ಯರ್ಥಿಗಳಿಗೆ ನೇರ ಉದ್ಯೋಗಾವಕಾಶ ದೊರೆಯಲಿದೆ. ಅಲ್ಲದೇ, ಮಾರುಕಟ್ಟೆಯಲ್ಲಿ ಯಾವ ರೀತಿಯ ಕೌಶಲಗಳಿಗೆ ಬೇಡಿಕೆ ಇದೆ ಎಂಬುದು ಮನವರಿಕೆಯಾಗುತ್ತದೆ. ಒಂದಕ್ಕಿಂತ ಹೆಚ್ಚು ಕಂಪನಿಗಳ ಸಂದರ್ಶನ ಎದುರಿಸುವುದರಿಂದ ಅಭ್ಯರ್ಥಿಗಳಲ್ಲಿ ಆತ್ಮವಿಶ್ವಾಸ ವೃದ್ಧಿಯಾಗಲಿದೆ. ವೃತ್ತಿ ಬದುಕಿನ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ’ ಎಂದು ಅವರು ಅಭಿಪ್ರಾಯಪಟ್ಟರು.

ಯುವಜನ ಕೇವಲ ಸಾಂಪ್ರದಾಯಿಕ ಸರ್ಕಾರಿ ನೌಕರಿ, ವೈದ್ಯಕೀಯ ಅಥವಾ ಎಂಜಿನಿಯರಿಂಗ್ ವೃತ್ತಿಗಳಿಗೆ ಸೀಮಿತವಾಗಬಾರದು. ವಿವಿಧ ವಲಯಗಳಲ್ಲಿ ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ಉದ್ಯೋಗದ ಮಾಹಿತಿಗಾಗಿ ದಿನಪತ್ರಿಕೆಗಳು, ದೂರದರ್ಶನದ ಸಂದರ್ಶನಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಎಚ್.ಹರೀಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಮೂಡಿಗೆರೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಯರಾಮಗೌಡ, ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಎಚ್.ಎಸ್.ಸುಜಾತಾ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-126-1187065314

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.