ಚಿಕ್ಕನಾಯಕನಹಳ್ಳಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ ತರಬೇತಿ ಕಾರ್ಯಾಗಾರ ನಡೆಯಿತು.

ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ ) ಹಾಗೂ ಉದ್ಯೋಗ ಭರವಸೆ ಕೋಶದ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ವಿಶೇಷ ಉದ್ಯೋಗ ಕೌಶಲ ತರಬೇತಿ ಕಾರ್ಯಾಗಾರ ನಡೆಯಿತು.

‘ರಿಲಯನ್ಸ್ ಫೌಂಡೇಶನ್ ಸ್ಕಿಲ್ ಅಕಾಡೆಮಿ’ ಮತ್ತು ‘ಮ್ಯಾಜಿಕ್ ಬಸ್ ಫೌಂಡೇಶನ್’ ಸಹಯೋಗದೊಂದಿಗೆ ನಡೆದ ಈ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಬದುಕಿಗೆ ಅಗತ್ಯವಿರುವ ಸಂವಹನ ಕಲೆ, ಸಂದರ್ಶನ ಎದುರಿಸುವ ವಿಧಾನ ಹಾಗೂ ವ್ಯಕ್ತಿತ್ವ ವಿಕಸನ ಕೌಶಲಗಳ ಕುರಿತು ತರಬೇತಿ ನೀಡಲಾಯಿತು.

ಉದ್ಯೋಗ ಭರವಸೆ ಕೋಶದ ಸಂಚಾಲಕ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣದ ನಂತರ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಲು ಪ್ರಾಯೋಗಿಕ ಕೌಶಲ ಅವಶ್ಯಕ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪ್ರಮಾಣಪತ್ರ ಸಾಲುವುದಿಲ್ಲ. ಉನ್ನತ ಮಟ್ಟದ ಉದ್ಯೋಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಬೇಕಾದ ವಿಶೇಷ ತರಬೇತಿಯನ್ನು ವಿದ್ಯಾರ್ಥಿಗಳು ಪದವಿ ಹಂತದಲ್ಲಿಯೇ ಪಡೆದುಕೊಂಡು ಸಾಮರ್ಥ್ಯ ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜ್ಯೋತಿ ಎಂ.ಜಿ. ಮಾತನಾಡಿ, ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟಗಳನ್ನು ಮೀರಿ ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೆ ಇಂತಹ ಉಚಿತ ಕೌಶಲ ತರಬೇತಿಗಳು ದಾರಿದೀಪವಾಗುತ್ತವೆ. ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ಉತ್ತಮ ಉದ್ಯೋಗಗಳನ್ನು ಗಿಟ್ಟಿಸಿಕೊಳ್ಳಲು ವಿದ್ಯಾರ್ಥಿಗಳು ಇಂತಹ ಸುವರ್ಣಾವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬೆಂಗಳೂರಿನ ರಾಯಲ್ ಫೌಂಡೇಶನ್ನ ಲತೇಶ್ ಕೆ.ಆರ್., ಸಂತೋಷ್ ಕುಮಾರ್, ಮದನ್ ಕುಮಾರ್ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-17-1782317623

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.