ಚಿತ್ರದುರ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯ ‘ಸಖಿ’ (ಒನ್ ಸ್ಟಾಪ್ ಸೆಂಟರ್) ಘಟಕ ಯೋಜನೆಯಡಿ 2026–27ನೇ ಸಾಲಿಗೆ ಕೇಸ್ ವರ್ಕರ್/ ಸೋಷಿಯಲ್ ವರ್ಕರ್–1 ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

‘ಕೇಸ್ ವರ್ಕರ್ / ಸೋಷಿಯಲ್ ವರ್ಕರ್’ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ₹ 25,000 ಗೌರವಧನ ನೀಡಲಾಗುತ್ತದೆ. ಅಭ್ಯರ್ಥಿಗಳು ಬಿಎಸ್ಡಬ್ಲ್ಯು, ಬಿ.ಎ (ಸಮಾಜಶಾಸ್ತ್ರ) ಅಥವಾ ಮಹಿಳಾ ಅಧ್ಯಯನದಲ್ಲಿ ಪದವಿ ಪಡೆದಿರಬೇಕು. ಬಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು. ಇದರೊಂದಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದ್ದು, 21 ರಿಂದ 45 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಹ ಅಭ್ಯರ್ಥಿಗಳು ಮೇ 16ರಿಂದ ಅರ್ಜಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿ ಹಾಗೂ ಅರ್ಜಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ ಜಿಲ್ಲೆ, ಓಬವ್ವ ಕ್ರೀಡಾಂಗಣದ ಹತ್ತಿರ, ಜಿಲ್ಲಾ ಬಾಲಭವನ ಆವರಣ, ಚಿತ್ರದುರ್ಗ ಈ ವಿಳಾಸಕ್ಕೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಮೊ. ನಂ; 08194–234579 ಸಂಖ್ಯೆ, ಇ–ಮೇಲ್: ddwcdcta@gmail.com ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-44-421958052

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.