ಗುರುವಾರ , ಮಾರ್ಚ್ 23, 2023
21 °C

1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳ 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಕೆಯ ಕೊನೆ ದಿನಾಂಕವನ್ನು ನವೆಂಬರ್‌ 20ಕ್ಕೆ ವಿಸ್ತರಿಸಲಾಗಿದೆ.

ಅಕ್ಟೋಬರ್‌ ಮೊದಲ ವಾರದಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ನೇಮಕಾತಿ ನಡೆಯಲಿದೆ.

ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ತೇರ್ಗಡೆಯಾಗುವುದು ಕಡ್ಡಾಯವಾಗಿರುತ್ತದೆ. ಈ ವಿಷಯಗಳಲ್ಲಿ ಮಾತ್ರ ವಿವರಣಾತ್ಮಕ ಉತ್ತರ ಬರೆಯಬೇಕು. ಉಳಿದ ವಿಷಯಗಳಲ್ಲಿ ಬಹು ಆಯ್ಕೆಯ ಪ್ರಶ್ನೆಗಳು ಮಾತ್ರ ಇರುತ್ತವೆ. ಡಿಸೆಂಬರ್‌ನಲ್ಲಿ ಪರೀಕ್ಷೆ ನಡೆಸಲಾಗುವುದು.

ಕೆಇಎ ವೆಬ್‌ಸೈಟ್ ಮೂಲಕ ಅ.7ರಂದು ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ನವೆಂಬರ್ 20 ಕೊನೆಯ ದಿನವಾಗಿರುತ್ತದೆ. ಒಟ್ಟು 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಲ್ಲಿ ಶೇಕಡ 5ರಷ್ಟು ಹುದ್ದೆಗಳನ್ನು ಇಲಾಖೆಯ ‘ಸಿ’ ವೃಂದದಿಂದ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 

ವಯೋಮಿತಿ, ಅರ್ಜಿ ಶುಲ್ಕ, ವೇತನ ಶ್ರೇಣಿ ಮತ್ತಿತರ ಮಾಹಿತಿಗಳನ್ನು ಕೆಇಎ ವೆಬ್‌ಸೈಟ್ https://kea.kar.nic.inನಲ್ಲಿ ಪಡೆಯಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು