ದಾವಣಗೆರೆ: ನಗರದ ಎ.ಜಿ.ಬಿ ಪ್ರಥಮದರ್ಜೆ ಕಾಲೇಜಿನಲ್ಲಿ ಏಪ್ರಿಲ್ 29ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಕನ್ಯಕಾಪರಮೇಶ್ವರಿ ದೇವಸ್ಥಾನ ಡೈಮಂಡ್ ಜ್ಯೂಬಿಲಿ ವಿದ್ಯಾಪೀಠದ ಉಪಾಧ್ಯಕ್ಷ ಆರ್.ಎಲ್. ಪ್ರಭಾಕರ್ ತಿಳಿಸಿದರು.

ವಿದ್ಯಾಪೀಠವು 1977ರಲ್ಲಿ ಸ್ಥಾಪನೆಯಾಗಿದ್ದು, ಇದರ ಅಡಿಯಲ್ಲಿ 1 ಪದವಿ ಕಾಲೇಜು, 1 ಪಿಯುಸಿ ಕಾಲೇಜು ಹಾಗೂ 6 ಶಾಲೆಗಳಿವೆ. ಒಟ್ಟು 1,575 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಎ.ಜಿ.ಬಿ. ಪದವಿ ಕಾಲೇಜಿನಲ್ಲಿ ಬಿ.ಸಿ.ಎ ಹಾಗೂ ಬಿ.ಕಾಂ ಕೋರ್ಸ್ಗಳಿವೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಬೆಂಗಳೂರಿನ ‘ಮ್ಯಾಜಿಕ್ ಬಸ್ ಫೌಂಡೇಷನ್’ ಎನ್.ಜಿ.ಒ ಸಹಯೋಗದೊಂದಿಗೆ 16 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸುತ್ತಿವೆ. ಅಂದು ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಮೇಳ ನಡೆಯಲಿದೆ ಎಂದರು.

ಎ.ಜಿ.ಬಿ ಪ್ರಥಮದರ್ಜೆ ಕಾಲೇಜು 27 ವರ್ಷಗಳಿಂದ ಸೇವೆ ಸಲ್ಲಿಸುತ್ತಿದೆ. ಈ ಕಾಲೇಜಿಗೆ ಇಲ್ಲಿಯವರೆಗೆ 28 ರ್ಯಾಂಕ್ಗಳು ಬಂದಿವೆ. 2025-26 ನೇ ಸಾಲಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯದಿಂದ 3 ರ್ಯಾಂಕ್ಗಳು ಬಂದಿವೆ ಎಂದು ಹೇಳಿದರು.

ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ ತರಬೇತಿ ನೀಡಲಾಗುತ್ತಿದೆ. ಜೊತೆಗೆ ಉದ್ಯೋಗ ನೀಡುವ ಕಂಪನಿಗಳೊಂದಿಗೆ ಸಂಪರ್ಕ ಸಾಧಿಸಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲಾಗುತ್ತಿದೆ. ಮಾಹಿತಿ ತಂತ್ರಜ್ಞಾನ (ಐಟಿ) ಹಾಗೂ ಮಾಹಿತಿ ತಂತ್ರಜ್ಞಾನೇತರ (ಐಟಿಯೇತರ) ಹುದ್ದೆಗಳಿಗಾಗಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ ಎಂದರು.

ಉದ್ಯೋಗ ಮೇಳದಲ್ಲಿ ನಗರದ ಎಲ್ಲ ಕಾಲೇಜುಗಳ ವಿದ್ಯಾರ್ಥಿಗಳೂ ಭಾಗವಹಿಸಬಹುದು. ಐಟಿಐ, ಡಿಪ್ಲೊಮಾ ಹಾಗೂ ಪದವೀಧರರು ಭಾಗವಹಿಸಬಹುದು ಎಂದು ತಿಳಿಸಿದರು.

ವಿದ್ಯಾಪೀಠದ ಖಜಾಂಚಿ ಕಾಸಲ್ ಎಸ್. ಸತೀಶ್, ಯೋಜನಾ ಕಾರ್ಯದರ್ಶಿ ಕಾಸಲ್ ವಿ. ನಾಗರಾಜ್, ಆಡಳಿತಾಧಿಕಾರಿ ಬಿ.ಪಿ. ಕುಮಾರ್, ಪ್ರಾಂಶುಪಾಲ ಭರಮಗೌಡ ಪಾಟೀಲ್, ಮ್ಯಾನೇಜರ್ ಆರ್.ಸಿ. ಹಾಲಪ್ಪಶೆಟ್ಟಿ, ಸಾಯಿಪ್ರಸಾದ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-43-981625671

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.