ಧಾರವಾಡ: ‘ರಾಜ್ಯ ಸರ್ಕಾರವು ಆರು ತಿಂಗಳಲ್ಲಿ 56,432 ಸಾವಿರ ಹುದ್ದೆಗಳನ್ನು ಭರ್ತಿ ಮಾಡಬೇಕು, ಇದೇ ವರ್ಷ ಇನ್ನೂ 50 ಸಾವಿರ ಹುದ್ದೆಗಳನ್ನು ಭರ್ತಿ ಮಾಡಬೇಕು’ ಎಂದು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ಅಧ್ಯಕ್ಷ ಕಾಂತಕುಮಾರ್ ಒತ್ತಾಯಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘43 ಇಲಾಖೆಗಳಲ್ಲಿ ಖಾಲಿ 2.84 ಲಕ್ಷ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಬೇಕು. ಪ್ರಾಥಮಿಕ, ಪ್ರೌಢ ಹಾಗೂ ಪಿಯುಸಿ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಒಟ್ಟಿಗೆ ನಡೆಸಬೇಕು’ ಎಂದು ಆಗ್ರಹಿಸಿದರು.

‘ನೇಮಕಾತಿ ಪ್ರಕ್ರಿಯೆ ನಿಟ್ಟಿನಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಬಾರದು, ಕಾಲಹರಣ ಮಾಡಬಾರದು. ಅಧಿಸೂಚನೆ ಪ್ರಕಟಿಸುವವರೆಗೆ ಹೋರಾಟ ಮಾಡುತ್ತೇವೆ. ಸರ್ಕಾರವು ಹೋರಾಟ ಮಾಡುವುದನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ’ ಎಂದು ದೂರಿದರು.

‘ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಪ್ರತಿಭಟನೆ (100 ಜನರ ಮಿತಿ) ನಡೆಸಲು ಕೋರ್ಟ್ ಸೂಚಿಸಿರುವ ಕುರಿತು ಮೇಲ್ಮನವಿ ಸಲ್ಲಿಸಿದ್ಧೇವೆ. ಧಾರವಾಡದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಕೋರಿ ಮತ್ತೆ ಮನವಿ ಮಾಡಿದ್ದೇವೆ. ಈಗ ಕೋರ್ಟ್ ರಜೆ ಇದೆ’ ಎಂದು ಪ್ರತಿಕ್ರಿಯಿಸಿದರು.

ನಾಗಪ್ಪ ಹುಂಡಿ ಸುದ್ದಿಗೋಷ್ಠಿಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-24-667352188

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.