ಬೆಂಗಳೂರು: ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಹುದ್ದೆಗಳ ಭರ್ತಿಗೆ ಫೆ. 28ರಂದು ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಅರ್ಹತಾ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ) ಪ್ರಕಟಿಸಿದೆ. ಪಟ್ಟಿಯಲ್ಲಿ ಒಂದೇ ಸಮುದಾಯಕ್ಕೆ (ನಾಯ್ಕ್) ಸೇರಿದ 70ಕ್ಕೂ ಹೆಚ್ಚು ಅಭ್ಯರ್ಥಿಗಳ ಹೆಸರಿದ್ದು ಅನುಮಾನಕ್ಕೆ ಕಾರಣವಾಗಿದೆ. ಪಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
1,112 ಹುದ್ದೆಗಳ ಭರ್ತಿಗೆ ಕೆಪಿಎಸ್‍ಸಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು. ಇದೀಗ, 1: 3 ಅನುಪಾತದಲ್ಲಿ ಅರ್ಹತಾ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, 3,852 ಮಂದಿ ಆಯ್ಕೆ ಆಗಿದ್ದಾರೆ. ಪಟ್ಟಿಯಲ್ಲಿ ‘ನಾಯ್ಕ್’ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳ ಹೆಸರನ್ನು ಒಂದು ಹೆಸರಿನ ನಡು ನಡುವೆ ಸೇರಿಸಲಾಗಿದೆ.
ಕೆಲ ಅಭ್ಯರ್ಥಿಗಳು ಈ ಬಗ್ಗೆ ಕೆಪಿಎಸ್‌ಸಿಗೆ ಆಕ್ಷೇಪಣೆ ಸಲ್ಲಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದೂ ಆಗ್ರಹಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ಪಡೆಯಲು ಕೆಪಿಎಸ್‌ಸಿ ಕಾರ್ಯದರ್ಶಿಗೆ ಕರೆ ಮಾಡಿದರೂ ಅವರು ಸಂಪರ್ಕಕ್ಕೆ ಲಭ್ಯರಾಗಲಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.