ಗುರುವಾರ , ಅಕ್ಟೋಬರ್ 21, 2021
27 °C

ಪೂರ್ವ ರೈಲ್ವೆ: 3366 ಹುದ್ದೆಗಳಿಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಪೂರ್ವ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 3366 ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: ಫಿಟ್ಟರ್, ಟರ್ನರ್‌, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್‌, ಪ್ಲಂಬರ್‌, ಪೇಂಟರ್‌ ಹುದ್ದೆಗಳ ನೇಮಕಾತಿ ನಡೆಯಲಿದೆ

ಒಟ್ಟು ಹುದ್ದೆಗಳ ಸಂಖ್ಯೆ: 3366

ವಿದ್ಯಾರ್ಹತೆ: ಹುದ್ದೆಗಳಿಗೆ ಸಂಬಂಧಿಸಿದಂತೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ತರಬೇತಿ ಭತ್ಯೆ: ಭಾರತ ಸರ್ಕಾರದ ನಿಯಮಗಳ ಅನ್ವಯ ತರಬೇತಿ ಭತ್ಯೆ ನೀಡಲಾಗುವುದು.

ವಯೋಮಿತಿ ಸಡಿಲಿಕೆ: ಅಕ್ಟೋಬರ್‌ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ₹100. ಎಸ್‌ಸಿ / ಎಸ್‌ಟಿ / ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ನೇಮಕಾತಿ ವಿಧಾನ: ಎಸ್‌ಎಸ್‌ಎಲ್‌ಸಿ ಹಾಗೂ ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್‌ ಲಿಸ್ಟ್‌ ತಯಾರಿಸಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌ https://er.indianrailways.gov.in ಗೆ ಲಾಗಿನ್‌ ಆಗಿ ಅರ್ಜಿ ಸಲ್ಲಿಸುವ ಮಾಹಿತಿಯನ್ನು ಪಡೆಯಬಹುದು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: 03, ನವೆಂಬರ್‌ 2021

ವೆಬ್‌ಸೈಟ್‌: https://er.indianrailways.gov.in

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು