ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗವಾರ್ತೆ: ಎಸ್‌ಬಿಐನಲ್ಲಿ 2,056 ಪ್ರೊಬೆಷನರಿ ಆಫೀಸರ್‌ ಹುದ್ದೆಗಳು

Last Updated 6 ಅಕ್ಟೋಬರ್ 2021, 19:30 IST
ಅಕ್ಷರ ಗಾತ್ರ

ಐಬಿಪಿಎಸ್‌ನಲ್ಲಿ ವಿವಿಧ ಹುದ್ದೆಗಳು

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್‌ ಸೆಲೆಕ್ಷನ್ (ಐಬಿಪಿಎಸ್‌) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಸಹಾಯಕ ಪ್ರಾಧ್ಯಾಪಕರು, ರಿಸರ್ಚ್ ಅಸೋಸಿಯೇಟ್‌, ಹಿಂದಿ ಆಫೀಸರ್‌, ಐಟಿ ಎಂಜಿನಿಯರ್‌, ಐಟಿ ಡೇಟಾಬೇಸ್ ಅಡ್ಮಿನಿಸ್ಟ್ರೇಟರ್‌ ಸೇರಿದಂತೆ ಇತರ ಹುದ್ದೆಗಳು.

ವಿದ್ಯಾರ್ಹತೆ: ವಿವಿಧ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ.

ವಯೋಮಿತಿ: ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 21 ಹಾಗೂ ಗರಿಷ್ಠ 45

ಆಯ್ಕೆ ಪ್ರಕ್ರಿಯೆ: ಆನ್‌ಲೈನ್ ಪರೀಕ್ಷೆ ಹಾಗೂ ಇತರ ಮಾನದಂಡಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 14, 2021

ಹೆಚ್ಚಿನ ಮಾಹಿತಿಗೆ: https://ibpsonline.ibps.in/ibpsrvpsep21/

ಎಸ್‌ಬಿಐನಲ್ಲಿ ಪ್ರೊಬೆಷನರಿ ಆಫೀಸರ್‌ ಹುದ್ದೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಪ್ರೊಬೆಷನರಿ ಆಫೀಸರ್‌ ಹುದ್ದೆಗಳ ಭರ್ತಿ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆ: ಪ್ರೊಬೆಷನರಿ ಆಫೀಸರ್‌

ಹುದ್ದೆಗಳು ಸಂಖ್ಯೆ: 2056

ಸ್ಥಳ: ಭಾರತದೆಲ್ಲೆಡೆ

ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರಬೇಕು.

ವಯೋಮಿತಿ: ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ. (ಏಪ್ರಿಲ್‌ 1, 2021ಕ್ಕೆ ಅನ್ವಯವಾಗುವಂತೆ). ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ₹ 750. ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 25, 2021

ಹೆಚ್ಚಿನ ಮಾಹಿತಿಗೆ: https://bank.sbi/web/careers

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT