ಉದ್ಯೋಗವಾರ್ತೆ: ಬಿಇಎಲ್‌ನಲ್ಲಿ ಅಪ್ರೆಂಟಿಸ್ ಹುದ್ದೆಗಳು

ಬಿಇಎಲ್‌ನಲ್ಲಿ ಅಪ್ರೆಂಟಿಸ್ ಹುದ್ದೆಗಳು
ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ (ಬಿಇಎಲ್) ಡಿಪ್ಲೋಮಾ ಮುಗಿಸಿದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆ: ಡಿಪ್ಲೋಮಾ ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ: 80
ಸ್ಥಳ: ಗಾಜಿಯಾಬಾದ್
ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 3 ವರ್ಷಗಳ ಡಿಪ್ಲೋಮಾ ಕೋರ್ಸ್ ಅನ್ನು ಪೂರ್ಣಗೊಳಿಸಿರಬೇಕು.
ಆಯ್ಕೆ ಪ್ರಕ್ರಿಯೆ: ದಾಖಲಾತಿ ಪರಿಶೀಲನೆ ಹಾಗೂ ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 15, 2021
ಹೆಚ್ಚಿನ ಮಾಹಿತಿಗೆ: bel-india.in
ಕೆಎಸ್‌ಒಯುನಲ್ಲಿ ಬೋಧಕ ಹುದ್ದೆಗಳು
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್‌ಒಯು) ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳು: ಪ್ರೊಫೆಸರ್ ಹುದ್ದೆ
ಹುದ್ದೆಗಳ ಸಂಖ್ಯೆ: 32
ಸ್ಥಳ: ಮೈಸೂರು
ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ, ಸಿಎ, ಸ್ನಾತಕೋತ್ತರ ಪದವಿ, ಪಿಎಚ್‌ಡಿ, ಎಂಎ, ಬಿಯೆಡ್, ಎಂಯೆಡ್ ಮುಗಿಸಿರಬೇಕು.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕೆಎಸ್‌ಒಯು ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಕೆ ವಿಳಾಸ: ರಿಜಿಸ್ಟ್ರಾರ್, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಮುಕ್ತಗಂಗೋತ್ರಿ,ಮೈಸೂರು, ಕರ್ನಾಟಕ – 570006
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 11, 2021
ಹೆಚ್ಚಿನ ಮಾಹಿತಿಗೆ: ksoumysuru.ac.in
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.