ಇಸಿಐಎಲ್‌ನಲ್ಲಿ ಟ್ರೇಡ್ ಅಪ್ರೆಂಟೀಸ್ ಹುದ್ದೆಗಳು
ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಇಸಿಐಎಲ್) 2021ನೇ ಸಾಲಿನ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಟ್ರೇಡ್ ಅಪ್ರೆಂಟೀಸ್ ಹುದ್ದೆಗಳಿಗೆ ಸೇರಲು ಬಯಸುವವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆ: ಟ್ರೇಡ್ ಅಪ್ರೆಂಟೀಸ್
ಹುದ್ದೆಗಳ ಸಂಖ್ಯೆ: 243
ಸ್ಥಳ: ಭಾರತದೆಲ್ಲೆಡೆ
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಐಟಿಐ ಹಾಗೂ ಎನ್‌ಸಿವಿಟಿ ಪ್ರಮಾಣ ಪತ್ರ ಪಡೆದಿರಬೇಕು. ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಿಸಿದ ಟ್ರೇಡ್ ಬಗ್ಗೆ ಅನುಭವವಿದ್ದವರಿಗೆ ಆದ್ಯತೆ.
ವಯೋಮಿತಿ: ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 3 ವರ್ಷ,
ಅಂಗವಿಕಲರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಶುಲ್ಕ: ಇಲ್ಲ
ನೇಮಕಾತಿ ಪ್ರಕ್ರಿಯೆ: ಮೆರಿಟ್ ಹಾಗೂ ವೈಯಕ್ತಿಕ ಸಂದರ್ಶನದ ಆಧಾರದ
ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 16, 2021
ಹೆಚ್ಚಿನ ಮಾಹಿತಿಗೆ: www.ecil.co.in
ಕೃಪೆ: buddy4study.com
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.