ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ವಾರ್ತೆ: ಯುಪಿಎಸ್‌ಸಿಯಲ್ಲಿ ಜಂಟಿ ಕಾರ್ಯದರ್ಶಿ ಹಾಗೂ ನಿರ್ದೇಶಕರ ಹುದ್ದೆ

Last Updated 17 ಮಾರ್ಚ್ 2021, 19:30 IST
ಅಕ್ಷರ ಗಾತ್ರ

ಯುಪಿಎಸ್‌ಸಿಯಲ್ಲಿ 30 ಹುದ್ದೆಗಳು
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಗ್ರೂಪ್‌ ಎ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಯುಪಿಎಸ್‌ಸಿ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಜಂಟಿ ಕಾರ್ಯದರ್ಶಿಗಳು ಹಾಗೂ ನಿರ್ದೇಶಕರು (ವಿವಿಧ ಇಲಾಖೆಗಳಲ್ಲಿ)

ಹುದ್ದೆಗಳ ಸಂಖ್ಯೆ: 30

ವಿದ್ಯಾರ್ಹತೆ: ಹುದ್ದೆಗೆ ಅಗತ್ಯವಿರುವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ 10 ರಿಂದ 15 ವರ್ಷಗಳ ಉದ್ಯೋಗ ಅನುಭವ ಅಗತ್ಯ. ‌

ವಯೋಮಿತಿ: ಜಂಟಿ ಕಾರ್ಯದರ್ಶಿಗಳ ಹುದ್ದೆಗೆ ಗರಿಷ್ಠ 55 ವರ್ಷ ಹಾಗೂ ನಿರ್ದೇಶಕರ ಹುದ್ದೆಗೆ ಗರಿಷ್ಠ 45 ವರ್ಷ.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 22, 2021

ಹೆಚ್ಚಿನ ವಿವರಗಳಿಗೆ: https://www.upsconline.nic.in/

***
ಮಂಡ್ಯ ನ್ಯಾಯಾಲಯದಲ್ಲಿ ಬೆರಳಚ್ಚುಗಾರರ ಹುದ್ದೆಗಳು

ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಬೆರಳಚ್ಚುಗಾರರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ವೆಬ್‌ಸೈಟ್‌ನಲ್ಲಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಕಳುಹಿಸಬೇಕು.

ಹುದ್ದೆ: ಬೆರಳಚ್ಚುಗಾರರು

ಸ್ಥಳ: ಮಂಡ್ಯ

ಹುದ್ದೆಗಳ ಸಂಖ್ಯೆ: 8

ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಮತ್ತು ಆಂಗ್ಲ ಬೆರಳಚ್ಚು ಹಿರಿಯ ಶ್ರೇಣಿ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷ, ಸಾಮಾನ್ಯ ವರ್ಗಕ್ಕೆ ಗರಿಷ್ಠ 35, 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ 38, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ – 1 ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ: ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹200, ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗಕ್ಕೆ ₹100 ಶುಲ್ಕವನ್ನು ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 3, 2021

ಅರ್ಜಿ ಸಲ್ಲಿಸುವ ವಿಳಾಸ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಜಿಲ್ಲೆ, ಮಂಡ್ಯ.

ವೆಬ್‌ಸೈಟ್ ವಿಳಾಸ: https://districts.ecourts.gov.in/mandya

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT