ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗವಾರ್ತೆ: ಎಸ್‌ಬಿಐನಲ್ಲಿ 48 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Last Updated 9 ಫೆಬ್ರುವರಿ 2022, 19:30 IST
ಅಕ್ಷರ ಗಾತ್ರ

ಎಸ್‌ಬಿಐನಲ್ಲಿ ಹುದ್ದೆಗಳು

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ಸಂಖ್ಯೆ: 48

ಸ್ಥಳ: ಬೆಂಗಳೂರು ಹಾಗೂ ಮುಂಬೈ

ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಪಡೆದಿರಬೇಕು.

ವಯೋಮಿತಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ನಿಯಮಗಳ ಅನ್ವಯ ಅಭ್ಯರ್ಥಿಗೆ ಗರಿಷ್ಠ 40 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಒಬಿಸಿ ಅಭ್ಯರ್ಥಿಗಳಿಗೆ ₹750, ಎಸ್‌ಸಿ, ಎಸ್‌ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರುವರಿ 25, 2022

ಹೆಚ್ಚಿನ ಮಾಹಿತಿಗೆ: sbi.co.in

ಗಡಿ ಭದ್ರತಾ ಪಡೆಯಲ್ಲಿ ಹುದ್ದೆಗಳು

ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) 2022ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆ: ಕಾನ್‌ಸ್ಟೇಬಲ್‌ (ಜನರಲ್ ಡ್ಯೂಟಿ)

ಹುದ್ದೆಗಳ ಸಂಖ್ಯೆ: 2788

ಸ್ಥಳ: ದೇಶದೆಲ್ಲೆಡೆ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, 12ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷ ಹಾಗೂ ಗರಿಷ್ಠ 23 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷ, ಮಾಜಿ ಯೋಧರಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.

ನೇಮಕಾತಿ ಪ್ರಕ್ರಿಯೆ: ದಾಖಲಿ ಪರಿಶೀಲನೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ: ಇಲ್ಲ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್‌ 1, 2022

ಹೆಚ್ಚಿನ ಮಾಹಿತಿಗೆ: https://rectt.bsf.gov.in/

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT