ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ಮೈಸೂರಿನಲ್ಲಿ ಕೆಲಸ ಮಾಡಬೇಕು.
ಹುದ್ದೆಗಳ ವಿವರ: ಸಂಶೋಧನಾ ಅಧಿಕಾರಿ
ಹುದ್ದೆಗಳ ಸಂಖ್ಯೆ: 13
ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಎಂಎಸ್ಸಿ / ಬಿ.ಇಡಿ / ಎಂಎ / ಎಂ.ಟೆಕ್ ಪದವಿ ಹೊಂದಿರಬೇಕು.
ಅರ್ಜಿ ಶುಲ್ಕ: ಸಾಮಾನ್ಯ ವರ್ಗ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹ 100, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹ 40. ಮಹಿಳಾ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
ಅರ್ಜಿ ಸಲ್ಲಿಕೆಯ ವಿಧಾನ: ಆಸಕ್ತ ಆಭ್ಯರ್ಥಿಗಳು https://aiishmysore.in/en/ ಈ ವೆಬ್ಸೈಟ್ನಲ್ಲಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು, ಅರ್ಜಿಯನ್ನು ಭರ್ತಿ ಮಾಡಿ – ಮುಖ್ಯ ಆಡಳಿತಾಧಿಕಾರಿ, ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು-570006 ಈ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 29, 2021
ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ವೆಬ್ಸೈಟ್ ನೋಡಬಹುದು: https://aiishmysore.in/en/