ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

KPSC: ವಿವಿಧ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ

Last Updated 4 ಜನವರಿ 2022, 8:18 IST
ಅಕ್ಷರ ಗಾತ್ರ

ಕರ್ನಾಟಕ ಲೋಕಸೇವಾ ಆಯೋಗವು(kpsc) ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಯ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿದೆ.

ಸದರಿ ಹುದ್ದೆಗಳಿಗೆ 2017ರಿಂದ 2021ರವರೆಗಿನ ಅವಧಿಯಲ್ಲಿ ಅಧಿಸೂಚನೆ ಹೊರಡಿಸಿ ನೇಮಕಾತಿ ಪರೀಕ್ಷೆ ನಡೆಸಿತ್ತು. ಈ ಹುದ್ದೆಗಳ ಆಯ್ಕೆಪಟ್ಟಿಹಾಗೂ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿದೆ.

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದು, ಸಂದರ್ಶನ ಎದುರಿಸಿದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ನೋಡಬಹುದು. ಅಭ್ಯರ್ಥಿಗಳು ತಮ್ಮ ಹೆಸರು, ರಿಜಿಸ್ಟರ್‌ ಸಂಖ್ಯೆಯ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಯ ಅಂಕಗಳು, ಸಂದರ್ಶನದ ಅಂಕಗಳನ್ನು ಸಹ ಚೆಕ್‌ ಮಾಡಿಕೊಳ್ಳಬಹುದು.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಸಚಿವಾಲಯ, ಅಲ್ಪಸಂಖ್ಯಾತರ ನಿರ್ದೇಶನಾಲಯ, ಆಯುಷ್ ಇಲಾಖೆ, ಪೌರಾಡಳಿತ ನಿರ್ದೇಶನಾಲಯದಲ್ಲಿ ಹಲವು ಹುದ್ದೆಗಳು ಖಾಲಿ ಇದ್ದವು.

ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್‌ ನೋಡುವುದು.

ವೆಬ್‌ಸೈಟ್‌: http://kpsc.kar.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT